Friday, March 13, 2026
Flats for sale
Homeಜಿಲ್ಲೆಬೆಳ್ತಂಗಡಿ : ಪೊಲೀಸರಿಗೆ ಧಮ್ಕಿ ಪ್ರಕರಣ ; ಶಾಸಕ ಹರೀಶ್ ಪೂಂಜಾ ರನ್ನು ಅರೆಸ್ಟ್‌...

ಬೆಳ್ತಂಗಡಿ : ಪೊಲೀಸರಿಗೆ ಧಮ್ಕಿ ಪ್ರಕರಣ ; ಶಾಸಕ ಹರೀಶ್ ಪೂಂಜಾ ರನ್ನು ಅರೆಸ್ಟ್‌ ಬಂದ ಪೊಲೀಸ್ ತಂಡ, ಮನೆ ಮುಂದೆ ಕಾರ್ಯಕರ್ತರ ಹೈಡ್ರಾಮಾ!

ಬೆಳ್ತಂಗಡಿ : ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿರುವ ಬೆನ್ನಲ್ಲೇ ಅವರನ್ನು ಅರೆಸ್ಟ್‌ ಮಾಡಲು ಮನೆಗೆ ಪೊಲೀಸರು ಬಂದಿದ್ದಾರೆ. ಆದರೆ, ತಮ್ಮ ರೂಮಿನಲ್ಲೇ ಇರುವ ಹರೀಶ್‌ ಪೂಂಜಾ ಅವರು ಇನ್ನೂ ಹೊರಗೆ ಬಂದಿಲ್ಲ. ಈ ನಡುವೆ ಸ್ಥಳಕ್ಕೆ ಲಾಯರ್‌ಗಳು, ಬಿಜೆಪಿ ಕಾರ್ಯಕರ್ತರು ಬಂದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಹೈಡ್ರಾಮಾಕ್ಕೆ ಕಾರಣವಾಯಿತು.

ಬೆಳ್ತಂಗಡಿಯಲ್ಲಿ ಅಕ್ರಮ ಗಣಿಗಾರಿಕೆಯ ವಿಚಾರದಲ್ಲಿ ಸ್ಫೋಟಕ ಕಾಯ್ದೆಯಡಿ ಬಂಧನವಾಗಿರುವ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರವಾಗಿ ಹರೀಶ್ ಪೂಂಜ ಪ್ರತಿಭಟನೆ ನಡೆಸಿದ್ದರು. ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಅನುಮತಿ ಇಲ್ಲದೆ ಪ್ರತಿಭಟನೆ ಮಾಡಿಸಿದ್ದು ಮಾತ್ರವಲ್ಲದೆ ಸಭೆಯಲ್ಲಿ ಅವರು ಮಾಡಿದ ಭಾಷಣದ ವಿಚಾರವಾಗಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಪೊಲೀಸ್ ಅಧಿಕಾರಿಗಳ ವಿರುದ್ಧ ಕೀಳು ಮಟ್ಟದ ಬಾಷೆ ಪ್ರಯೋಗಿಸಿದ್ದು, ಮತ್ತು ಡಿಜೆ ಹಳ್ಳಿ ಕೆ.ಜಿ ಹಳ್ಳಿ ಮಾದರಿಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಶಾಸಕರು ಹೇಳಿದ್ದರು. ಇದೀಗ ಪೊಲೀಸರು ಶಾಸಕ ಹರೀಶ್ ಪೂಂಜಾ ಮನೆಗೆ ಆಗಮಿಸಿ ಅವರ ಬಂಧನಕ್ಕೆ ಮುಂದಾಗಿದ್ದಾರೆ. ಇನ್ನು ಹರೀಶ್ ಪೂಂಜಾ ಬಂಧನಕ್ಕೆ ಪೊಲೀಸರು ಮುಂದಾದ ವಿಚಾರದ ಸುದ್ದಿ ತಿಳಿದು ಪೂಂಜಾ ಪರ ವಕೀಲ ಹಾಗೂ ಬೆಂಬಲಿಗರು ಆಗಮಿಸಿದ್ದಾರೆ. ಶಾಸಕರ ಬಂಧನಕ್ಕೆ ಅವಕಾಶ ನೀಡದಂತೆ ಕಾರ್ಯಕರ್ತರು ತಮ್ಮ ವಾಹನಗಳನ್ನು ದಾರಿಗೆ ಅಡ್ಡವಾಗಿಟ್ಟಿದ್ದಾರೆ. ಈ ವಿಚಾರವಾಗಿ ಮಾತನಾಡಿದ ವಕೀಲ ಶಂಭು ಶರ್ಮಾ ಅವರು ಪೊಲೀಸರು ನಿಯಮ ಬಾಹಿರವಾಗಿ ಶಾಸಕರನ್ನು ಬಂಧಿಸಲು ಮುಂದಾಗಿದ್ದಾರೆ. ವಿಚಾರಣೆಗೆ ಹಾಜರಾಗಿ ಅಂತ ನೊಟೀಸು ಕೂಡ ನೀಡದೆ ನೇರವಾಗಿ ಮನೆಗೆ ಬಂದಿದ್ದಾರೆ ಇದು ತಪ್ಪು ಎಂದು ಹೇಳಿದ್ದಾರೆ. ಡಿಎಸ್‌ಪಿಯವರು ನಿಮ್ಮನ್ನು ಬಂಧಿಸಲು ಬಂದಿದ್ದಲ್ಲ ವಿಚಾರಣೆಗೆ ಬನ್ನಿ ಎಂದು ಕರೆಯಲು ಬಂದಿದ್ದು ಎಂದಿದ್ದಾರೆ. ಆದ್ರೆ ಈ ರೀತಿಯಾಗಿ ಕರೆಯಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ಈ ನಡುವೆ ಬಿಜೆಪಿ ಕಾರ್ಯಕರ್ತರು,ಹರೀಶ್ ಪೂಂಜಾ ಬೆಂಬಲಿಗರು ಶಾಸಕರ ಮನೆಗೆ ಡೌದಹಿಸಿದ್ದು ಕಾಂಗ್ರೆಸ್ ಸರಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿ ಶಾಸಕರ ಮನೆಸುತ್ತ ವಾಹಗಳನ್ನು ನಿಲ್ಲಿಸಿ ಯಾರೂ ಹೊರಹೋಗದಂತೆ ರಸ್ತೆ ಬ್ಲಾಕ್ ಮಾಡಿ ತಡೆದಿದ್ದಾರೆ.

ಈ ನಡುವೆ ರಾಜಕಾರಣಿಗಳ ಒತ್ತಡಕ್ಕೆ ಮಣಿದು ಪೊಲೀಸರು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ, ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಹತ್ಯೆಯಾಗಿದೆ ಮತ್ತು ಕೊಡಗಿನಲ್ಲಿ ತಮ್ಮ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ವಿನಾನಾರಣ ಬಿಜೆಪಿ ಮುಖಂಡರನ್ನು ಟಾರ್ಗೆಟ್ ಮಾಡಲಾಗುತ್ತಿದೆ, ಇದನ್ನೆಲ್ಲ ನಾವು ಸಹಿಸಿಕೊಳ್ಳುವುದು ಸಾಧ್ಯವಿಲ್ಲ, ಗೃಹ ಸಚಿವರು ತಮ್ಮ ಅಧಿಕಾರಿಗಳೊಂದಿಗೆ ಮಾತಾಡಿ ಇದನ್ನು ನಿಲ್ಲಿಸಬೇಕು ಎಂದು ವಿಜಯೇಂದ್ರ ಹೇಳಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪೊಲೀಸರ ವಿರುದ್ಧ ಮಾತಾಡಿದ್ದು ತಪ್ಪು ಅಂತ ಹೇಳುವ ವಿಜಯೇಂದ್ರ ಪಕ್ಷದ ಕಾರ್ಯಕರ್ತನನ್ನು ಬಂಧಿಸಿದಕ್ಕೆ ಆವೇಶಗೊಂಡು ಅವರು ಹಾಗೆ ಮಾತಾಡಿರುತ್ತಾರೆ, ಅದರೆ ಇದನ್ನೇ ನೆಪವಾಗಿಸಿಕೊಂಡು ಪೊಲೀಸರು ಹರೀಶ್ ಬಂಧನಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ .

RELATED ARTICLES

LEAVE A REPLY

Please enter your comment!
Please enter your name here

Most Popular