Tuesday, February 4, 2025
Flats for sale
Homeಜಿಲ್ಲೆಕಾಸರಗೋಡು : ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು, ಮುಸ್ಲಿಂ ಯುವಕನ ಜೊತೆ ಪರಾರಿಯಾದ...

ಕಾಸರಗೋಡು : ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು, ಮುಸ್ಲಿಂ ಯುವಕನ ಜೊತೆ ಪರಾರಿಯಾದ ಖಾಸಗಿ ಸಂಸ್ಥೆಯ ಶಿಕ್ಷಕಿ.

ಕಾಸರಗೋಡು : ದಕ್ಷಿಣ ಕನ್ನಡದ ನೆರೆಯ ಜಿಲ್ಲೆ, ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಕೇಳಿಬಂದಿದೆ. ಗಡಿನಾಡು ಕಾಸರಗೋಡಿನಲ್ಲಿಆರ್ಥಿಕವಾಗಿ ಹಿಂದುಳಿದ ವರ್ಗದ ಯುವತಿಯರಿಗೆ ಆಡಂಬರದ ಬದುಕಿನ ಆಮಿಷ ತೋರಿಸಿ ಲವ್ ಜಿಹಾದ್‌ನ ಜಾಲಕ್ಕೆ ಸಿಲುಕಿಸಲಾಗುತ್ತಿದೆ ಎಂದು ವಿಎಚ್​​​ಪಿ, ಭಜರಂಗದಳ ಹಾಗೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿವೆ. ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಲವ್ ಜಿಹಾದ್ ಸಕ್ರಿಯವಾಗಿದೆ. ಲವ್ ಜಿಹಾದ್​ಗೆ ಬದಿಯಡ್ಕ ಪೊಲೀಸರು ಸಾಥ್ ನೀಡುತ್ತಿದ್ದಾರೆ ಎಂದು ವಿಎಚ್​​​ಪಿ ಆಕ್ರೋಶ ವ್ಯಕ್ತಪಡಿಸಿದೆ.

ಮೇ 23ರಂದು ಮನೆಯಿಂದ ಹೊರಟ ಯುವತಿ ದಿಢೀರ್ ನಾಪತ್ತೆಯಾಗಿದ್ದರು. ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಇಬ್ಬರ ಭಾವಚಿತ್ರಗಳ ಸಹಿತ ನೋಟೀಸ್ ಪತ್ತೆಯಾಗಿತ್ತು. ರಿಜಿಸ್ಟರ್ ಕಚೇರಿಯಲ್ಲಿ ಯುವತಿ ಮತ್ತು ಮಿರ್ಶಾದ್ ಮದುವೆಯಾಗಿರುವುದು ತಿಳಿದುಬಂದಿತ್ತು. ಮದುವೆಯಾದ ನಂತರ ಮೇ 27ರಂದು ಬದಿಯಡ್ಕ ಠಾಣೆಗೆ ಜೋಡಿ ಹಾಜರಾಗಿತ್ತು. ಮುಸ್ಲಿಂ ಲೀಗ್ ನಾಯಕರೊಬ್ಬರು ಲವ್ ಜಿಹಾದ್​ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಾಸರಗೋಡಿನ ವಿಎಚ್​​​​ಪಿ ಸೇರಿ ಹಿಂದೂ ಪರ ಸಂಘಟನೆಗಳು ಅರೋಪಿಸಿವೆ. ಜಿಲ್ಲೆಯ ಬದಿಯಡ್ಕದಲ್ಲಿ ಲವ್‌ ಜಿಹಾದ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಹಿಂದೂ ಪರ ಸಂಘಟನೆಗಳು ಈ ಆರೋಪ ಮಾಡಿವೆ.

ಈಕೆ ಕಾಸರಗೋಡಿನ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದಾರೆ. ಆಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸದ್ಯ ಆಕೆ ಸ್ವಇಚ್ಛೆಯಂತೆ ಯುವಕನ ಜೊತೆ ತೆರಳಿದ್ದಾರೆ. ಇದರ ಬೆನ್ನಲ್ಲೇ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಲವ್ ಜಿಹಾದ್​​ಗೆ ಕೇರಳದ ಮುಸ್ಲಿಂ ಲೀಗ್ ನೇತಾರನೋರ್ವ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾರೆ. ಆ ನೆಪದಲ್ಲಿ ಹಿಂದೂ ಯುವತಿಯೊಬ್ಬಳನ್ನು ಇಸ್ಲಾಂಗೆ ಮತಾಂತರಿಸಲು ಭಾರೀ ಸಂಚು ರೂಪಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.ಯುವತಿಯ ತಂದೆಯ ದೂರಿನಂತೆ ಬದಿಯಡ್ಕ ಪೊಲೀಸರು ನಾಪತ್ತೆ ಕೇಸು ದಾಖಲಿಸಿದ್ದರು. ದೂರಿನಲ್ಲಿ ಪೋಷಕರು ಯುವತಿಯ ಅಪಹರಣದ ಅನುಮಾನ ವ್ಯಕ್ತಪಡಿಸಿದ್ದರು.

ನೇಹಾಳ ತಂದೆಯ ದೂರಿನಂತೆ ಬದಿಯಡ್ಕ ಪೊಲೀಸರು ನಾಪತ್ತೆ ಕೇಸು ದಾಖಲಿಸಿದ್ದರು. ದೂರಿನಲ್ಲಿ, ಪೋಷಕರು ಯುವತಿಯ ಅಪಹರಣದ ಅನುಮಾನ ವ್ಯಕ್ತಪಡಿಸಿದ್ದರು. ಮೇ.23ರಂದು ಮನೆಯಿಂದ ಹೊರಟ ನೇಹಾ ದಿಢೀರ್ ನಾಪತ್ತೆಯಾಗಿದ್ದಳು. ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಇಬ್ಬರ ಭಾವಚಿತ್ರಗಳ ಸಹಿತ ನೋಟೀಸ್ ಪತ್ತೆಯಾಗಿದೆ. ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾಗಿದ್ದ ನೇಹಾ ಮತ್ತು ಮಿರ್ಶಾದ್, ಮದುವೆಯಾಗಿ ಮೇ.27ರಂದು ಬದಿಯಡ್ಕ ಠಾಣೆಗೆ ಹಾಜರಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular