Thursday, July 23, 2026
Homeಜಿಲ್ಲೆಉಡುಪಿ : ಭೂ ದಾಖಲೆ ನೀಡುವ ವೇಳೆ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಉಪ್ಪೂರು...

ಉಡುಪಿ : ಭೂ ದಾಖಲೆ ನೀಡುವ ವೇಳೆ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್.

ಉಡುಪಿ : ಉಪ್ಪೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇನಾಯತುಲ್ಲಾ ಬೇಗ್ ಮತ್ತು ಬಿಲ್ ಕಲೆಕ್ಟರ್ ಸಂಜಯ್ ಅವರು ಭೂ ದಾಖಲೆ ನೀಡಲು ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಇವರಿಬ್ಬರು ರವಿ ಎಂಬ ವ್ಯಕ್ತಿಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ಕೆ ಸಿ ಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಬಂಧಿತ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular