Monday, March 16, 2026
Flats for sale
Homeರಾಜ್ಯಚಿಕ್ಕಮಗಳೂರು : ಚಾರ್ಮಾಡಿ ಘಾಟಿ ರಸ್ತೆಯ 7 ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿಗೆ ಅಡ್ಡ ಬಂದ ಕಾಡಾನೆ,ಭಯಭೀತರಾದ...

ಚಿಕ್ಕಮಗಳೂರು : ಚಾರ್ಮಾಡಿ ಘಾಟಿ ರಸ್ತೆಯ 7 ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿಗೆ ಅಡ್ಡ ಬಂದ ಕಾಡಾನೆ,ಭಯಭೀತರಾದ ಪ್ರಯಾಣಿಕರು!

ಚಿಕ್ಕಮಗಳೂರು : ಇತ್ತಿಚ್ಚಿನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಕಳೆದ ಕೆಲ ತಿಂಗಳಿಂದ ಅನೇಕ ಅಮಾಯಕ ಜೀವಗಳನ್ನು ಕಾಡುಪ್ರಾಣಿಗಳ ಉಪಟಳದಿಂದ ಪ್ರಾಣತೆತ್ತಿದ್ದಾರೆ.ಆದರೆ ಚಲಿಸುತ್ತಿರುವ ಬಸ್ಸಿನ ಮುಂದೆ ಕಾಡಾನೆ ದಿಡೀರನೆ ಪ್ರತ್ಯಕ್ಷವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಾಡಾನೆಯೊಂದು ಅಡ್ಡ ಬಂದ ಘಟನೆ ಬಸ್ಸಿನ ಪಕ್ಕದಲ್ಲೇ ಕಾಡಾನೆ ಹಾದು ಹೋಗಿದೆ. ಕಾಡಾನೆ ಕಂಡು ಪ್ರಯಾಣಿಕರು ಗಾಬರಿಗೊಂಡಿದ್ದಾರೆ .

ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಆಗಿತ್ತು. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಾಡಾನೆಯನ್ನು ಕಂಡ ಕೂಡಲೇ ಬಸ್ಸನ್ನು ನಿಲ್ಲಿಸಿದ ಚಾಲಕ ಮೌನಮುರಿದಿದ್ದಾನೆ . ಒಂಟಿ ಸಲಗ ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ನಿಂತಿತ್ತು.ಅರ್ಧ ಗಂಟೆ ಬಳಿಕ ಒಂಟಿ ಸಲಗ ಅರಣ್ಯಕ್ಕೆ ಇಳಿದಿದೆ.ಇತ್ತೀಚಿನ ದಿನಗಳಲ್ಲಿ ಅನೇಕ ಬಾರಿ ಚಾರ್ಮಾಡಿ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷವಾಗುತ್ತಿದ್ದು ಕಾಡಾನೆಯನ್ನ ಸ್ಥಳಾಂತರಿಸುವಂತೆ ಸ್ಥಳಿಯರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular