Thursday, July 23, 2026
Homeದೇಶಪಶ್ಚಿಮ ಬಂಗಾಳ ; ನಿಂತಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ ; 15 ಸಾವು...

ಪಶ್ಚಿಮ ಬಂಗಾಳ ; ನಿಂತಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ ; 15 ಸಾವು 30 ಮಂದಿಗೆ ಗಾಯ.

ಪಶ್ಚಿಮ ಬಂಗಾಳ ; ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಯಾಣಾಮ್ ಪೆಸ್ಸಂಜೆರ್ ರೈಲಿನ ಮೂರು ಬೋಗಿಗಳು ಜಖಂ ಆಗಿದ್ದು ೫ ಮಂದಿ ಸಾವನಪ್ಪಿದ್ದು ಸುಮಾರು ೩೦ ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.

ಇಂದು ಬೆಳಗ್ಗೆ 8:45 ರ ಸುಮಾರಿಗೆ ನ್ಯೂ ಜಲ್ಪೈಗುರಿ ಜಂಕ್ಷನ್‌ನ ಮುಂದೆ ಕತಿಹಾರ್ ರೈಲ್ವೆ ವಿಭಾಗದ ರಂಗಪಾಣಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಕ್ಸ್‌ನ ಪೋಸ್ಟ್‌ನಲ್ಲಿ ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು ಎಂದು ತಿಳಿಸಿದ್ದಾರೆ.ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ರಕ್ಷಣಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ಬರೆದಿದ್ದಾರೆ.ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಕಾರ್ಯಾಚರಣೆಯ ಮೇಲ್ವಿಚಾರಣೆಗೆ ಸ್ಥಳಕ್ಕೆ ಧಾವಿಸುತ್ತಿದ್ದಾರೆ.ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರು ಘಟನೆಯ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular