Friday, March 13, 2026
Flats for sale
Homeರಾಜಕೀಯಶಿವಮೊಗ್ಗ : ಬಿಜೆಪಿ ಹಿರಿಯ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ.

ಶಿವಮೊಗ್ಗ : ಬಿಜೆಪಿ ಹಿರಿಯ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ.

ಶಿವಮೊಗ್ಗ : ಬಿಜೆಪಿ ಹಿರಿಯ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಬಿಜೆಪಿಯ ಹಿರಿಯ ಮುಖಂಡ. ಸರಳ, ಸಜ್ಜನ ಎಂಬ ಹೆಗ್ಗಳಿಕೆ. ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ಮಿ. ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಎಂ ಬಿ ಭಾನುಪ್ರಕಾಶ್ ಬಿಜೆಪಿ ಸಂಘಟನೆಯಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದರು.ಬಳಿಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೆ ಬಿಜೆಪಿ ಕಾರ್ಯಕರ್ತರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸ್ವಗ್ರಾಮ ಮತ್ತೂರಿಗೆ ಮೃತದೇಹ ರವಾನೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ(RSS) ಕಟ್ಟಾ ಅನುಯಾಯಿಯಾಗಿದ್ದ ಭಾನುಪ್ರಕಾಶ್, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾಗ ಬಿಜೆಪಿಯಿಂದ ಬಂಗಾರಪ್ಪ ಎದುರು ನಿಂತಿದ್ದರು. ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಪಕ್ಷ ಕಟ್ಟುವಲ್ಲಿ ಶ್ರಮಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular