ಶಿವಮೊಗ್ಗ : ಮದ್ವೆಯಾಗುವುದಾಗಿ ನಂಬಿಸಿ ಸಾಗರದ ಮಹಿಳೆಗೆ ವಂಚಿಸಿದ ಪ್ರಕರಣದಲ್ಲಿ ಶಿವಮೊಗ್ಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಂಧನವಾಗಿದೆ. ಈ ಹಿಂದೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆರನ್ನು ಬಂಧಿಸಿದ್ದಾರೆ .
ಸಾಗರದ ಮಹಿಳೆಗೆ ವಂಚಿಸಿದ ಪ್ರಕರಣದಲ್ಲಿ ಈ ಹಿಂದೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.ಆದರೆ, ಕಾರಣಾಂತರದಿಂದ ಕೇಸ್ ದಾಖಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಂಸ್ರಸ್ತ ಮಹಿಳೆ ಶಿವಮೊಗ್ಗ ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದರು. ಇದೀಗ ಮಹಿಳಾ ಠಾಣೆ ಪೊಲೀಸ್ ಸಿಪಿಐ ಭರತ್ ಕುಮಾರ್ ನೇತೃತ್ವದಲ್ಲಿ ಸಾಗರದ ನಿವಾಸದಲ್ಲಿ ಅರುಣ್ನನ್ನು ಅರೆಸ್ಟ್ ಮಾಡಲಾಗಿದೆ.