Sunday, March 15, 2026
Flats for sale
Homeಜಿಲ್ಲೆಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಜುಲೈ 9ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ.

ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಜುಲೈ 9ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ.

ಬೆಂಗಳೂರು : ಮುಂದಿನ ಜುಲೈ 9ರವರೆಗೆ ಕರಾವಳಿ ಜಿಲ್ಲೆಗಳಲ್ಲಿಭಾರಿ ಮಳೆಯಾಗುವ ಸಾಧ್ಯತೆವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 7ರ ಬಳಿಕ ಕರಾವಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೀದರ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಗೆ ಯಾವುದೇ ಮಳೆ ಸೂಚನೆ ಇಲ್ಲ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular