Saturday, November 23, 2024
Flats for sale
Homeರಾಜ್ಯಹಾಸನ: ಸ್ಥಳೀಯ ವಾಹನ ಚಾಲಕರಿಂದ ಪ್ರವಾಸಿಗರಿಗೆ ಹಲ್ಲೆ : ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿದ...

ಹಾಸನ: ಸ್ಥಳೀಯ ವಾಹನ ಚಾಲಕರಿಂದ ಪ್ರವಾಸಿಗರಿಗೆ ಹಲ್ಲೆ : ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿದ ಅರಣ್ಯ ಇಲಾಖೆ.

ಹಾಸನ : ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ. ಇತ್ತೀಚಿಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಘಟನೆ ವರದಿಯಾಗಿತ್ತು.

ಪಟ್ಲ ಬೆಟ್ಟ ಸಕಲೇಶಪುರ ಪಟ್ಟಣದಿಂದ 40 ಕಿಮೀ ದೂರದಲ್ಲಿದೆ. ಪ್ರತಿನಿತ್ಯ ಒಂದಲ್ಲ ಒಂದು ವಿಚಾರದಲ್ಲಿ ಸ್ಥಳೀಯರು ಮತ್ತು ಪ್ರವಾಸಿಗರ ನಡುವೆ ಆಗಾಗ ನಡೆಯುತ್ತಿದ್ದ ಕರಣ ಜಗಳಕ್ಕೆ ಕಡಿವಾಣ ಹಾಕಿ ಪ್ರಕೃತಿಯನ್ನು ರಕ್ಷಿಸಲು ಇಲಾಖೆ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.ಈ ಹಿಂದೆ ಪಟ್ಲ ಬೆಟ್ಟ ಪ್ರದೇಶದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯ ವಾಹನಗಳ ಚಾಲಕರ ನಡುವೆ ಜಗಳ ಸಾಮಾನ್ಯವಾಗಿದೆ. ಆದರೆ, ಜನರು ಸ್ಥಳೀಯರಿಗೆ ಹೆದರಿ ದೂರು ದಾಖಲಿಸಲು ಹಿಂದೆ ಸರಿಯುವುದರಿಂದ ಇದು ಈವರೆಗೆ ಗಮನಕ್ಕೆ ಬಂದಿಲ್ಲ ಎಂದು ತಿಳಿದುಬಂದಿದೆ.

ಇದೀಗ ಪಟ್ಲ ಬೆಟ್ಟವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಸಿ ಸತ್ಯಭಾಮಾ ತಿಳಿಸಿದ್ದಾರೆ.ಪ್ರವಾಸೋದ್ಯಮ ಮತ್ತು ಅರಣ್ಯ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ಪ್ರವಾಸಿಗರ ಹಿತದೃಷ್ಟಿಯಿಂದ ಮಾರ್ಗಸೂಚಿಗಳನ್ನು ರೂಪಿಸಲು ಚಿಂತನೆ ನಡೆಸಲಾಗುತ್ತಿದೆ. ಭವಿಷ್ಯದಲ್ಲಿ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಆನ್‌ಲೈನ್ ಬುಕಿಂಗ್ ವ್ಯವಸ್ಥೆ ಪರಿಚಯಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular