Friday, March 13, 2026
Flats for sale
Homeರಾಜಕೀಯಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ,ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ವಕ್ಫ್...

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ,ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ವಕ್ಫ್ ಮಂಡಳಿಯಲ್ಲಿ ಭಾರಿ ಭ್ರಷ್ಟಾಚಾರ,ದೂರು ದಾಖಲು.!

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.ಎಲ್ಲ ಇಲಾಖೆಯಲ್ಲೂ ಭ್ರಷ್ಟಾಚಾರದಿಂದ ತುಂಬಿದ್ದು ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು ದಾಖಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ವರ್ಷ ಕಳೆಯುತ್ತಿದ್ದಂತೆ ಒಂದರ ಹಿಂದೆ ಒಂದಂತೆ ಹಗರಣಗಳು ಬೆಳಕಿಗೆ ಬರುತ್ತಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ, ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯಲ್ಲಿ, ಅಪೆಕ್ಸ್​ ಬ್ಯಾಂಕ್​​ನಲ್ಲಿ ನಡೆದ ಹಗರಣ ರಾಜ್ಯ ಸರ್ಕಾರದ ತಲೆಬಿಸಿಗೆ ಕಾರಣವಾಗಿವೆ. ಇದರ ಬೆನ್ನಲ್ಲೇ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಕರ್ನಾಟಕ ವಕ್ಫ್ ಮಂಡಳಿಯ ಹಣ ಅಕ್ರಮವಾಗಿ ವರ್ಗಾವಣೆಯಾದ ಆರೋಪ ಕೇಳಿ ಬಂದಿದ್ದು, ಮಾಜಿ ಸಿಇಒ ಝುಲ್ಫಿಕಾರುಲ್ಲಾ ವಿರುದ್ಧ ವಕ್ಫ್ ಮಂಡಳಿ ದೂರು ನೀಡಿದೆ. ಮಂಡಳಿ ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹಮದ್ ಅಬ್ಬಾಸ್ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು‌ ನೀಡಿದ್ದು, ಎಫ್​ಐಆರ್​ ದಾಖಲಾಗಿದೆ.

ಯಾವುದೇ ಸರಕಾರಬಂದರೂ ಖಜಾನೆಯನ್ನು ಲೂಟಿಹೊಡೆಯದೆ ಬಿಡುವುದಿಲ್ಲ ಎಂದು ಎಲ್ಲರಿಗೂ ತಿಳಿದ ವಿಚಾರ.ಆದರೆ ವಕ್ಫ್ ಮಂಡಳಿ ಆಸ್ತಿ ಮಾರಾಟ ಸಂಬಂಧ 4 ಕೋಟಿ ರೂ. ಹಣ ಮಂಡಳಿ‌ ಬ್ಯಾಂಕ್‌ ಖಾತೆಗೆ ಜಮೆಯಾಗಿದ್ದು ಈ ಹಣವನ್ನು ಝುಲ್ಫಿಕಾರುಲ್ಲಾ 2016ರಲ್ಲಿ ಚಿಂತಾಮಣಿಯ ವಿಜಯ ಬ್ಯಾಂಕ್​ಗೆ ಸಿಇಒ ಹೆಸರಿನಲ್ಲಿ ಎರಡು ಚೆಕ್​ಗಳ‌ ಮೂಲಕ ವರ್ಗಾವಣೆ ಮಾಡಿದ್ದರು. ಇದರಿಂದ ವಕ್ಫ್ ಮಂಡಳಿಗೆ 8 ಕೋಟಿ ರೂ.‌ನಷ್ಟವಾಗಿದೆ. ಝುಲ್ಫಿಕಾರುಲ್ಲಾ ಅವರು ಮಂಡಳಿಯ ಗಮನಕ್ಕೆ ತರದೆ ಹಣ ವರ್ಗಾವಣೆ, ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ದೂರು ವಕ್ಫ ಮಂಡಳಿ ದೂರು ದಾಖಲಿಸಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular