Thursday, March 12, 2026
Flats for sale
Homeಜಿಲ್ಲೆಮಂಗಳೂರು : ಕರಾವಳಿಯಲ್ಲಿ ರೆಡ್ ಅಲರ್ಟ್ : ನಿರಂತರ ಬಿಡದ ಮಳೆ,ಜನಜೀವನ ಅಸ್ಥವ್ಯಸ್ಥ,ದಕ್ಷಿಣ ಕನ್ನಡ ಜಿಲ್ಲೆಯ...

ಮಂಗಳೂರು : ಕರಾವಳಿಯಲ್ಲಿ ರೆಡ್ ಅಲರ್ಟ್ : ನಿರಂತರ ಬಿಡದ ಮಳೆ,ಜನಜೀವನ ಅಸ್ಥವ್ಯಸ್ಥ,ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಿಗೆ ಘೋಷಣೆ.

ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ18/7/2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯ ಪುತ್ತೂರು,ಬಂಟ್ವಾಳ,ಬೆಳ್ತಂಗಡಿ,ಸುಳ್ಯ, ಕಡಬ ತಾಲೂಕುಗಳಿಗೆ ಮಾತ್ರ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಮಕ್ಕಳು ತಗ್ಗು ಪ್ರದೇಶಗಳು, ಸರೋವರಗಳು, ಸಮುದ್ರ ತೀರ ಮತ್ತು ನದಿ ಬದಿಗಳಿಗೆ ಹೋಗದಂತೆ ಪಾಲಕರು ಖಚಿತಪಡಿಸಿಕೊಳ್ಳಬೇಕು. ಮೀನುಗಾರರಿಗೂ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಕಚೇರಿಯಲ್ಲಿಯೇ ಇರುವಂತೆ ತಿಳಿಸಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು ಜಾಗೃತರಾಗಿ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುವಂತೆ ಕೋರಲಾಗಿದೆ. ತಹಶೀಲ್ದಾರ್‌ಗೆ ನಿರಂತರ ಸಂಪರ್ಕದಲ್ಲಿರುವಂತೆ ಸೂಚಿಸಲಾಗಿದೆ.

ತಾಲೂಕು ಮಟ್ಟದಲ್ಲಿ ರಕ್ಷಣಾ ಕೇಂದ್ರಗಳನ್ನು ತೆರೆದು ಅವುಗಳನ್ನು ಸಜ್ಜುಗೊಳಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತುರ್ತು ಸೇವೆಯು ಟೋಲ್ ಫ್ರೀ ಕಂಟ್ರೋಲ್ ರೂಮ್ ಸಂಖ್ಯೆ 1077, ದೂರವಾಣಿ ಸಂಖ್ಯೆಗಳು 0824-2442590 (ಡಿಕೆ), 0820-2574802 (ಉಡುಪಿ) ಮೂಲಕ 24×7 ಲಭ್ಯವಿದೆ.

ಮುನ್ನೆಚ್ಚರಿಕೆ ಕ್ರಮವಾಗಿ, ನಿವಾಸಿಗಳು ಮತ್ತು ಪ್ರವಾಸಿಗರು ಕಡಲತೀರಗಳು, ನದಿಗಳು ಮತ್ತು ಜಲಪಾತಗಳನ್ನು ಸಮೀಪಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಮತ್ತು ಈ ಪ್ರದೇಶಗಳಲ್ಲಿ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಕೊಳ್ಳದಂತೆ ಸೂಚಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular