Friday, March 13, 2026
Flats for sale
Homeಕ್ರೀಡೆಪ್ಯಾರಿಸ್‌ : Paris Olympics 2024 : ಭಾರತಕ್ಕೆ ಮೊದಲ ಪದಕ ಕಂಚು ಗೆದ್ದ ಶೂಟರ್​...

ಪ್ಯಾರಿಸ್‌ : Paris Olympics 2024 : ಭಾರತಕ್ಕೆ ಮೊದಲ ಪದಕ ಕಂಚು ಗೆದ್ದ ಶೂಟರ್​ ಮನು ಭಾಕರ್.

ಪ್ಯಾರಿಸ್‌ : 2024ರ ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ. 10 ಮೀಟರ್‌ ಏರ್‌ ಪಿಸ್ತೂಲ್‌ ಮಹಿಳೆಯರ ಸಿಂಗಲ್ಸ್‌ ವಿಭಾಗದಲ್ಲಿ ಭಾರತದ ಮನು ಭಾಕರ್‌ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪಿಸ್ತೂಲ್​ ದೋಷದಿಂದ ಹಿನ್ನಡೆ ಅನುಭವಿಸಿದ್ದ ಶೂಟರ್​ ಮನು ಭಾಕರ್ಇದೀಗ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಐತಿಹಾಸಿಕ ಪದಕವೊಂದನ್ನು ಗೆದ್ದು ಸಂಭ್ರಮಿಸಿದ್ದಾರೆ. 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ಫೈನಲ್​ ಪಂದ್ಯದಲ್ಲಿ 221.7 ಅಂಕ ಗಳಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಒಲಿದ ಮೊದಲ ಪದಕ. ಕೊರಿಯಾದ ಶೂಟರ್​ಗಳಾದ ಓಹ್ ಯೇ ಜಿನ್(243.2), ಕಿಮ್​ ಯೆಜಿ(241.3) ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದರು.

ಶನಿವಾರ ಫೈನಲ್‌ ಪ್ರವೇಶಿಸಿದ್ದ 22 ವರ್ಷ ವಯಸ್ಸಿನ ಮನು ಭಾಕರ್‌ ಮೂರನೇ ದಿನವಾದ ಭಾನುವಾರ (ಜು.28) ಅಂತಿಮ ಸುತ್ತಿನಲ್ಲಿ 3ನೇ ಸ್ಥಾನ ಪಡೆದುಕೊಂಡರು. ಈ ಮೂಲಕ ಶೂಟಿಂಗ್‌ನಲ್ಲಿ ಭಾರತದ ಪರ ಪದಕ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾದರು. 2004ರಲ್ಲಿ ಅಥೆನ್ಸ್‌ನಲ್ಲಿ ನಡೆದ 10 ಮೀಟರ್‌ ಏರ್‌ ಪಿಸ್ತೂಲ್‌ ಸ್ಪರ್ಧೆಯಲ್ಲಿ ಸುಮಾ ಶಿರೂರ್‌ ಕೊನೆಯ ಬಾರಿಗೆ ಫೈನಲ್‌ ತಲುಪಿದ್ದರು.ಇದೀಗ ಮನು ಭಾಕರ್​ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಶೂಟಿಂಗ್​ನಲ್ಲಿ ಭಾರತಕ್ಕೆ ಪದಕ ಗೆದ್ದ ಮೊದಲ ಮಹಿಳಾ ಶೂಟರ್​ ಎನ್ನುವ ದಾಖಲೆಯನ್ನು ಕೂಡ ತಮ್ಮ ಹೆಸರಿಗೆ ಬರೆದರು.

RELATED ARTICLES

LEAVE A REPLY

Please enter your comment!
Please enter your name here

Most Popular