Monday, November 25, 2024
Flats for sale
Homeಜಿಲ್ಲೆಚಿಕ್ಕಮಗಳೂರು : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತ, ಸಂಚಾರ ಬಂದ್.

ಚಿಕ್ಕಮಗಳೂರು : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತ, ಸಂಚಾರ ಬಂದ್.

ಚಿಕ್ಕಮಗಳೂರು : ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಜಲಾಶಯಗಳೆಲ್ಲ ತುಂಬಿ ಹರಿಯುತ್ತಿದ್ದು ನೀರು ಗ್ರಾಮಗಳಿಗೆ ನುಗ್ಗಿ ಪ್ರವಾಹವಾಗುತ್ತಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಭಾಗದ ಹಲವೆಡೆ ಗುಡ್ಡ ಕುಸಿಯುತ್ತಿದ್ದು ಸಂಚಾರ ಮಾರ್ಗ ಬಂದ್ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿದಿದ್ದು ರಸ್ತೆ ಬಂದ್ ಮಾಡಲಾಗಿದೆ.

ಇಂದು ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಚಾರ್ಮಾಡಿ ಘಾಟಿಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದೆ. ಕಿರಿದಾದ ಅಪಾಯಕಾರಿ ರಸ್ತೆಯಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದೆ.ಇದರಿಂದ ಸವಾರರಿಗೆ ಜಾಗತ್ರವಹಿಸಲು ಜಿಲ್ಲಾಡಳಿತ ಸೂಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular