Thursday, July 23, 2026
Homeರಾಜ್ಯಮೈಸೂರು : ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ರಚನೆಯ ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್ ಹೈಕೋರ್ಟ್‌ಗೆ ರಿಟ್...

ಮೈಸೂರು : ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ರಚನೆಯ ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ.!

ಮೈಸೂರು : ನಾಡದೇವತೆ ಚಾಮುಂಡಿ ಬೆಟ್ಟಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ ಹಾಗೂ ಮೈಸೂರು ರಾಜವಂಶಸ್ಥರ ಮಧ್ಯೆ ಜಟಾಪಟಿ ಶುರುವಾಗಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್ ಮೈಸೂರು ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡದಂತೆ ಮೈಸೂರು ರಾಜಮನೆತನ ರಿಟ್ ಅರ್ಜಿ ಸಲ್ಲಿಸಿದ್ದು ರಿಟ್ ಅರ್ಜಿ ಸಂಬಂಧ ಪ್ರಮೋದದೇವಿ ಒಡೆಯರ್ ಮಾಹಿತಿ ನೀಡಿದ್ದಾರೆ. ದೇವಸ್ಥಾನವನ್ನ ಸರ್ಕಾರ ಪ್ರಾಧಿಕಾರದ ಹೆಸರಲ್ಲಿ ರೂಲಿಂಗ್ ಮಾಡೋಕೆ ಆಗೋದಿಲ್ಲ. ದೇವಸ್ಥಾನದಲ್ಲಿ ಸಮಸ್ಯೆ ಆದಾಗ ಮಾತ್ರವೇ ಸರ್ಕಾರ ಎಂಟ್ರಿ ಆಗಬಹುದು. ನಾವು ಸರ್ಕಾರಕ್ಕೆ ಕೊಟ್ಟ ಪ್ರಾಪರ್ಟಿ ಬಿಟ್ಟು ಸರ್ಕಾರಕ್ಕೆ ಕೊಟ್ಟಿರೋ ಬಗ್ಗೆ ನಾವು ಇವಾಗ ಕ್ಲೈಮ್ ಮಾಡೊದಿಲ್ಲಎಂದು ಹೇಳಿದ್ದಾರೆ.

ಚಾಮುಂಡಿ ಬೆಟ್ಟದ ನಿರ್ವಹಣೆ ಸಂಬಂಧ ಜಯಚಾಮರಾಜೇಂದ್ರ ಒಡೆಯರ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ನಿರ್ವಹಣೆ ಮಾಡಲು ಆಗೋದಿಲ್ಲ ಅಂತಾ ಬರೆದಿದ್ದರು. ಈಗ ನಾವು ನಿರ್ವಹಣೆ ಮಾಡೋ ಬಗ್ಗೆ ನಾನು ಹೆಚ್ಚೆನು ಮಾತಾಡೋದಿಲ್ಲ. ನ್ಯಾಯಾಲಯ, ಸರ್ಕಾರ ಈಗಲೂ ಗ್ರೀನ್ ಸಿಗ್ನಲ್ ಕೊಟ್ಟರೆ ಚಾಮುಂಡಿ ಬೆಟ್ಟವನ್ನ ನಾವೇ ನಿರ್ವಹಣೆ ಮಾಡ್ತೇವೆ‌ ಬೆಟ್ಟವನ್ನು ಬೆಟ್ಟವಾಗಿಯೇ ಉಳಿಸಿಕೋಳ್ಳಬೇಕು ಅನ್ನೋದು ನಮ್ಮ ವಾದ‌ ಸರ್ಕಾರಿ ಖರಾಬು ಅಂತಾ ಚಾಮುಂಡಿ ಬೆಟ್ಟವನ್ನು ಮಾಡಲು ಆಗೋದಿಲ್ಲ‌ ಕೇವಲ ಖರಾಬು ಅಂತಾ ಮಾತ್ರವೇ ಇದೆ, ಆದ್ರೆ ಸರ್ಕಾರಿ ಖರಾಬು, ಅ ಖರಾಬು ಬ ಖರಾಬು ಅಂತಾ ಇಲ್ಲ ಎಂದು ಹೇಳಿದರು.

ಕಳೆದ ಮಾರ್ಚ್ 7ರಂದು ಸದ್ದಿಲ್ಲದೇ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ರಾಜಮನೆತನದ ಅಸಮಾಧಾನಕ್ಕೆ ಕಾರಣವಾಗಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಮೂಲಕ ಚಾಮುಂಡೇಶ್ವರಿ ಬೆಟ್ಟದಲ್ಲಿ ರಾಜಮನೆತನದ ಅಧಿಕಾರಕ್ಕೆ ಬ್ರೇಕ್ ಹಾಕಲಾಗಿದೆಯಾ ಅನ್ನೋ ಅನುಮಾನ ಮೂಡಿದೆ. ಹೀಗಾಗಿ ರಾಜವಂಶಸ್ಥರು ಕೋರ್ಟ್ ಮೆಟ್ಟಿಲೇರಿತ್ತು. ಪ್ರಾಧಿಕಾರ ರಚನೆಯ ಪ್ರಶ್ನಿಸಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠ ತಾತ್ಕಾಲಿಕ ತಡೆ ಹಾಕಿದೆ. ಇದರ ಮಧ್ಯೆ ಇಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮಾಧ್ಯಮಗೋಷ್ಠಿ ಕರೆದಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular