Thursday, July 23, 2026
Homeಕ್ರೀಡೆಬೆಂಗಳೂರು : ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಪುತ್ರನ ಸಿಕ್ಸ್ –...

ಬೆಂಗಳೂರು : ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಪುತ್ರನ ಸಿಕ್ಸ್ – ವಿಡಿಯೋ ವೈರಲ್‌.

ಬೆಂಗಳೂರು : ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಮಗ ಸಮಿತ್ ದ್ರಾವಿಡ್ ಸಿಕ್ಸ್ ಬಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸಮಿತ್, ಕೆಎಸ್‌ಸಿಎ ಆಯೋಜಿಸುತ್ತಿರುವ ಮಹಾರಾಜ ಟಿ20 ಕ್ರಿಕೆಟ್ ಪಂದ್ಯಗಳಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಆಡುತ್ತಿದ್ದಾರೆ. ಬೆಂಗಳೂರು ಬ್ಲಾಸ್ಟರ್ ವಿರುದ್ಧದ ಪಂದ್ಯದಲ್ಲಿ ಅವರು ಬಾರಿಸಿದ ಸಿಕ್ಸ್‌ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ವಿಡಿಯೋ ನೋಡಿದ ಎಲ್ಲರೂ ದ್ರಾವಿಡ್ ಮತ್ತು ಸಮಿತ್ ನಡುವೆ ಹೋಲಿಕೆ ಮಾಡುತ್ತಿದ್ದಾರೆ. ಸಮಿತ್‌ರನ್ನು ಜೂನಿಯರ್ ರಾಹುಲ್ ದ್ರಾವಿಡ್ ಎಂದು ಅಭಿಮಾನಿಗಳು ಹೊಗಳುತ್ತಿದ್ದಾರೆ.ಮೈಸೂರು ವಾರಿಯರ್ಸ್ ತಂಡ ದೊಡ್ಡ ಮೊತ್ತದ ರನ್ ಗಳಿಸಿದರೂ 4 ರನ್‌ಗಳಿಂದ ಸೋಲು ಕಂಡಿತು. ಪಂದ್ಯಕ್ಕೆ ಸ್ವಲ್ಪ ಹೊತ್ತು ಮಳೆಯೂ ಅಡ್ಡಿಪಡಿಸಿತು.

RELATED ARTICLES

LEAVE A REPLY

Please enter your comment!
Please enter your name here

Most Popular