Thursday, July 23, 2026
Homeಜಿಲ್ಲೆಉಡುಪಿ : ಹಿಂದೂ ಯುವತಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿದ ಅನ್ಯಕೋಮಿನ ಯುವಕ,ಪರಿಸ್ಥಿತಿ ಉದ್ವಿಗ್ನ...

ಉಡುಪಿ : ಹಿಂದೂ ಯುವತಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿದ ಅನ್ಯಕೋಮಿನ ಯುವಕ,ಪರಿಸ್ಥಿತಿ ಉದ್ವಿಗ್ನ ..

ಉಡುಪಿ : ಕರಾವಳಿ ಜಿಲ್ಲೆಯಲ್ಲಿ ಮತ್ತೆ ಲವ್‌ ಜಿಹಾದ್‌ ಪ್ರಕರಣ ಬೆಳಕಿಗೆ ಬಂದಿದೆ. ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯನ್ನು ಕರೆದೊಯ್ದಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದಲ್ಲಿ 21 ವರ್ಷದ ಯುವತಿಗೆ ಯುವಕನೊಬ್ಬ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಬೆಳಗ್ಗೆ ಕಾರಿನಲ್ಲಿ ಹಿಂದೂ ಯುವತಿಯನ್ನು ಮುಸ್ಲಿಂ ಯುವಕನೋರ್ವ ಕಾರಿನಲ್ಲಿ ಕರೆದೊಯ್ದಿದಿದ್ದ ಎನ್ನಲಾಗಿದೆ. ಇದರ ಬೆನ್ನಲ್ಲೇ ಹಿಂದೂ ಕಾರ್ಯಕರ್ತರು ಗಲಾಟೆ ಮಾಡಿ ತಡೆಹಿಡಿದಿದ್ದಾರೆ.

ಈ ಬಗ್ಗೆ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಡಾ.ಅರುಣ್ ಕುಮಾರ್ ಅವರು ಘಟನೆಯ ಮಾಹಿತಿ ನೀಡಿದ್ದು, ”ಆರೋಪಿ ಅಲ್ತಾಫ್ ಸಂತ್ರಸ್ತೆಯನ್ನು ನಿರ್ದಿಷ್ಟ ಸ್ಥಳಕ್ಕೆ ಕರೆದಿದ್ದಾನೆ. ಆಕೆ ಬಂದಾಗ ಆಕೆಯನ್ನು ಅಪಹರಿಸಿ ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ನೀಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಈ ವೇಳೆ ಆಕೆಯ ಮೇಲೆ ಅತ್ಯಾಚಾರವೆಸಗಿದ್ದು, ಮತ್ತೋರ್ವ ಆರೋಪಿ ಜುಬೈರಾ ಜೊತೆಗೆ ಅವರು ಬಳಸುತ್ತಿದ್ದ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. “

ಕಾರ್ಕಳದ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಲ್ತಾಫ್‌ ಎಂಬಾತ ಕಾರಿನಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡು ಹೋಗಿದ್ದ. ಸಂಜೆಯಾಗುತ್ತಲೇ ಯುವತಿಯನ್ನ ವಾಪಸ್ ಕರೆ ತಂದಿದ್ದ, ವಿಷಯ ತಿಳಿಯುತ್ತಿದ್ದಂತೆ ಕಾರು ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಇನ್ನು ಕಾರಿನಲ್ಲಿದ್ದ ಯುವತಿ ನಶೆಯಲ್ಲಿದ್ದುದ್ದನ್ನು ಕಂಡ ಹಿಂದೂ ಕಾರ್ಯಕರ್ತರು ಗರಂ ಆಗಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ. ಇನ್ನು ಯುವತಿ ಕಾರ್ಕಳದಲ್ಲಿ ಉದ್ಯೋಗವೊಂದರಲ್ಲಿ ಇದ್ದು, ಅಲ್ತಾಫ್ ಗೆ ಈಗಾಗಲೇ ಮದುವೆಯಾಗಿ ಮಕ್ಕಳಿರುವುದಾಗಿ ಆರೋಪ ಕೇಳಿಬಂದಿದೆ. ಕಾರ್ಕಳ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular