ಹಾಸನ : ಹೀಗಾಗಿ ನಿರಂತರ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಮಣ್ಣು ಕುಸಿಯುತ್ತಿರುವ ಕಡೆ ಸೂಚನಾ ಫಲಕ ಅಳವಡಿಸುವ ಮೂಲಕ ತಾಲೂಕು ಆಡಳಿತ, ಹೆದ್ದಾರಿ ಪ್ರಾಧಿಕಾರದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಭೂಕುಸಿತ ಭೀತಿ ಹಿನ್ನಲೆ ಪ್ರತಿನಿತ್ಯ ಆತಂಕದಲ್ಲೇ ವಾಹನ ಸವಾರರು ಸಂಚಾರ ಮಾಡುವಂತಾಗಿದೆ.
ಜುಲೈ ತಿಂಗಳಲ್ಲಿ ಧಾರಾಕಾರ ಮಳೆಯಿಂದ ದೊಡ್ಡತಪ್ಲು ಬಳಿ ಗುಡ್ಡ ಕುಸಿದು ರಸ್ತೆ ಸಂಚಾರ ಬಂದ್ ಆಗಿತ್ತು. ಇದೀಗ ಹಲವು ದಿನಗಳಿಂದ ನಿರಂತರವಾಗಿ ಸುರಿಯುವ ಮಳೆಯಿಂದಾಗಿ ಈಗ ಮತ್ತೆ ಭೂಕುಸಿತದ ಭೀತಿ ಎದುರಾಗಿದೆ.ಈ ನಿಟ್ಟಿನಲ್ಲಿ ಮಣ್ಣು ಕುಸಿಯುತ್ತಿರುವ ಕಡೆ ಸೂಚನಾ ಫಲಕ ಅಳವಡಿಸುವ ಮೂಲಕ ತಾಲೂಕು ಆಡಳಿತ, ಹೆದ್ದಾರಿ ಪ್ರಾಧಿಕಾರದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಜೋರು ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗುತ್ತಿದ್ದು ಪದೇ ಪದೆ ಗುಡ್ಡ ಕುಸಿತದಿಂದ ಬೆಂಗಳೂರು ಹಾಗೂ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು ಸಂಪರ್ಕ ಕಡಿತಗೊಳ್ಳುವ ಭೀತಿಯಲ್ಲಿ ಜನರು ಇದ್ದಾರೆಂದು ತಿಳಿದಿದೆ.