Saturday, March 14, 2026
Flats for sale
Homeರಾಜ್ಯಬೆಂಗಳೂರು ; ದೇವನಹಳ್ಳಿ ಏರ್ಪೋಟ್ ರಸ್ತೆಯಲ್ಲಿ ಹಿಟ್​ ಆ್ಯಂಡ್ ರನ್​ಗೆ ಮೂವರು ವಿದ್ಯಾರ್ಥಿಗಳು ಬಲಿ.!

ಬೆಂಗಳೂರು ; ದೇವನಹಳ್ಳಿ ಏರ್ಪೋಟ್ ರಸ್ತೆಯಲ್ಲಿ ಹಿಟ್​ ಆ್ಯಂಡ್ ರನ್​ಗೆ ಮೂವರು ವಿದ್ಯಾರ್ಥಿಗಳು ಬಲಿ.!

ಬೆಂಗಳೂರು ; ಏರ್ಪೋಟ್ ರಸ್ತೆಯಲ್ಲಿಹಿಟ್ ಅಂಡ್ ರನ್ ಗೆ ಮೂವರು ವಿದ್ಯಾರ್ಥಿಗಳು ಬಲಿಯಾದ ಘಟನೆ ತಡರಾತ್ರಿ ನಡೆದಿದೆ.ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.ಮೂವರು ಯುವಕರು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿದ್ಯಾರ್ಥಿಗಳು GKVK ನಲ್ಲಿ ಬಿಎಸ್ಸಿ ವ್ಯಾಸಾಂಗ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.
ಅಪಘಾತದ ರಬಸಕ್ಕೆ ಹೆದ್ದಾರಿಯಲ್ಲಿ ಮೃತ ದೇಹಗಳು ನಜ್ಜು ಗುಜ್ಜಾಗಿದ್ದು ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.ಮೃತದೇಹಗಳು ಅಂಬೇಡ್ಕರ್​​​ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಗ್ರಾಮ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular