Thursday, March 12, 2026
Flats for sale
Homeಜಿಲ್ಲೆಮಂಗಳೂರು : ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ,ಪೊಲೀಸ್​​​ ಬಿಗಿ ಬಂದೋಬಸ್ತ್.

ಮಂಗಳೂರು : ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ,ಪೊಲೀಸ್​​​ ಬಿಗಿ ಬಂದೋಬಸ್ತ್.

ಮಂಗಳೂರು : ದಕ್ಷಿಣ ಕನ್ನಡ ಮಂಗಳೂರು ತಾಲೂಕಿನ ಕಾಟಿಪಳ್ಳದಲ್ಲಿ ಬಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದ್ದು ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ .ಈದ್ ಮಿಲಾದ್ ಮುನ್ನಾ ಈ ಘಟನೆ ನಡೆದಿದ್ದು ಸದ್ಯ ಮಸೀದಿಗೆ ಬೀಗಿಭದ್ರತೆ ಕಲ್ಪಿಸಲಾಗಿದೆ.

ಮಂಡ್ಯದ ನಾಗಮಂಗಲದಲ್ಲಿ ನಡೆದಿರುವ ಕೋಮು ಗಲಭೆಯ ಕಿಚ್ಚು ಆರುತ್ತಿರುವ ಸಂದರ್ಭದಲ್ಲೇ ಕೋಮು ಸೂಕ್ಷ್ಮ ಪ್ರದೇಶವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್​​ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ.ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.ಸದ್ಯ ಬಿಗಿ ಪೊಲೀಸ್​​​ ಬಂದೋಬಸ್ತ್​​​​​​​ ಕಲ್ಪಿಸಲಾಗಿದೆ.

ಪ್ರಚೋದನಕಾರಿ ಹೇಳಿಕೆ ನೀಡಿದ ವಿಚಾರವಾಗಿ ವಿಎಚ್​​ಪಿ ಹಾಗೂ ಬಜರಂಗದಳ ಮುಖಂಡರಾದ ಶರಣ್ ಪಂಪ್​ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ಹರಿಬಿಟ್ಟಿದ್ದ ಪುನಿತ್ ಅತ್ತಾವರ ವಿರುದ್ಧ ಮಂಗಳೂರಿನ‌ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿರುವ ಮಂಗಳೂರು ಪೊಲೀಸರು, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಈಗಾಗಲೇ ಎಚ್ಚರಿಕೆಯನ್ನೂ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular