Sunday, March 15, 2026
Flats for sale
Homeರಾಜ್ಯಮಂಡ್ಯ : ರಾತ್ರೋರಾತ್ರಿ ಆರ್​​ಎಸ್​​ಎಸ್ ಕಚೇರಿಗೆ ಪೊಲೀಸ್ ದಾಳಿ,ಸಂಘದ ಪ್ರಚಾರಕರ ಮೇಲೆ ದೌರ್ಜನ್ಯ , ಬಿಜೆಪಿ...

ಮಂಡ್ಯ : ರಾತ್ರೋರಾತ್ರಿ ಆರ್​​ಎಸ್​​ಎಸ್ ಕಚೇರಿಗೆ ಪೊಲೀಸ್ ದಾಳಿ,ಸಂಘದ ಪ್ರಚಾರಕರ ಮೇಲೆ ದೌರ್ಜನ್ಯ , ಬಿಜೆಪಿ ತೀವ್ರ ಖಂಡನೆ ..!

ಮಂಡ್ಯ : ಜಿಲ್ಲೆಯ ಪಾಂಡವಪುರದ ಆರ್‌ಎಸ್‌ಎಸ್ ಕಾರ್ಯಾಲಯಕ್ಕೆ ರಾತ್ರೋರಾತ್ರಿ ಪೊಲೀಸರು ನುಗ್ಗಿ, ಸಂಘದ ಪ್ರಚಾರಕರ ಮೇಲೆ ದೌರ್ಜನ್ಯ ನಡೆಸಿದ ಘಟನೆ ವರದಿಯಾಗಿದೆ .ಈ ಬಗ್ಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅರಾಜಕತೆ ಹೆಚ್ಚಾಗಿದ್ದು, ಹಿಂದೂಗಳನ್ನು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡುವ ಸನ್ನಿವೇಶ ಸೃಷ್ಟಿಸುತ್ತಿದೆ’’ ಎಂದು ಬಿಜೆಪಿ ಉಲ್ಲೇಖಿಸಿದೆ.ಆರ್‌ಎಸ್‌ಎಸ್ ಕಾರ್ಯಾಲಯಕ್ಕೆ ರಾತ್ರೋರಾತ್ರಿ ಪೊಲೀಸರು ನುಗ್ಗಿ, ಸಂಘದ ಪ್ರಚಾರಕರ ಮೇಲೆ ದೌರ್ಜನ್ಯ ನಡೆಸಿದ್ದು ಅಕ್ಷಮ್ಯ. ಸಂಘದ ಕಾರ್ಯಾಲಯಕ್ಕೆ ಸಕಾರಣವಿಲ್ಲದೆ ದಾಳಿ ನಡೆಸಿದ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ .

ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅರಾಜಕತೆ ಹೆಚ್ಚಾಗಿದ್ದು, ಹಿಂದೂಗಳನ್ನು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡುವ ಸನ್ನಿವೇಶ ಸೃಷ್ಟಿಸುತ್ತಿದೆ.ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜದಲ್ಲಿ ಅಸ್ಥಿರತೆ ಮೂಡಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಹಿಂದೂಗಳಿಗೆ ಬಹಿರಂಗ ಸವಾಲು ಎಸೆಯುವ ಮತಾಂಧರನ್ನು ಸ್ವತಂತ್ರವಾಗಿರಲು ಬಿಟ್ಟು, ರಾಷ್ಟ್ರಭಕ್ತ ಸ್ವಯಂಸೇವಕರ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಕಾಂಗ್ರೆಸ್ಸಿನ ಹಿಟ್ಲರ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ .

ನಾಗಮಂಗಲ ಗಲಭೆಯಲ್ಲಿ ಆರ್ಎಸ್ಎಸ್ ಮುಖಂಡರ ಬಂಧನ ಖಂಡಿಸಿ ಹಿಂದುಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಇದೇ ವೇಲೆ RSS ಕಾರ್ಯಾಲಯದ ಒಳ ನುಗ್ಗಿರುವ ಪೊಲೀಸರು ಸಂಘ ಕೆಲ ಮುಖಂಡರನ್ನ ವಶಕ್ಕೆ ಪಡೆದಿದ್ದಾರೆಂದು ಹೇಳಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular