Thursday, March 12, 2026
Flats for sale
Homeಜಿಲ್ಲೆಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ರಕ್ತದಾನ ಮಾಡಿದ ಸಂಸದ ಕ್ಯಾ. ಬ್ರಿಜೇಶ್‌...

ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ರಕ್ತದಾನ ಮಾಡಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ.!

ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ 74ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಪಕ್ಷದ ವತಿಯಿಂದ ಹಾಗೂ ಮೋದಿ ಅವರ ಅಭಿಮಾನಿಗಳು ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಆ ಮೂಲಕ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.

ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಇಂದು ಬೆಳಗ್ಗೆ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಈ ರಕ್ತದಾನ ಶಿಬಿರದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೂಡ ಪಾಲ್ಗೊಂಡು ಬೇರೆಯವರ ಜೀವಕ್ಕೆ ನೆರವಾಗುವ ನಿಟ್ಟಿನಲ್ಲಿ ರಕ್ತದಾನ ಮಾಡಿದ್ದಾರೆ. ಈ ವೇಳೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರಾಕೇಶ್ ರೈ ಮತ್ತು ಪ್ರಸನ್ನ ಮಾರ್ತ, ಕಾರ್ಯಕರ್ತರು ಹಾಗೂ ಮುಖಂಡರು ಜತೆಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular