Thursday, March 12, 2026
Flats for sale
Homeಕ್ರೈಂಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನಗೆ 14 ದಿನ...

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ .!

ಬೆಂಗಳೂರು : ಮಾಜಿ ಸಚಿವ ಮುನಿರತ್ನ ವಿರುದ್ಧ ಗುತ್ತಿಗೆದಾರ ಚೆಲುವರಾಜು ಎಂಬುವವರು ಜೀವ ಬೆದರಿಕೆ ಆರೋಪ ಮಾಡಿ ದೂರು ನೀಡಿದ್ದರು. ವೈಯಾಲಿಕಾವಲ್ ಪೊಲೀಸ್‌ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕೋರ್ಟ್ ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ಆದೇಶಿಸಿದೆ.

ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಮುನಿರತ್ನ ಅವರನ್ನು ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯದ ಮುಂದೆ ವೈಯಾಲಿಕಾವಲ್ ಠಾಣೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ತನಿಖೆಗಾಗಿ ಮುನಿರತ್ನ ಅವರನ್ನು ಮತ್ತೆ ಪೊಲೀಸರು ವಶಕ್ಕೆ ಕೋರಿದ್ದರು. ಆದರೆ, ಮುನಿರತ್ನ ಪರ ವಕೀಲರು ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿ, ಜಾಮೀನು ಅರ್ಜಿ ಕುರಿತು ವಾದ ಮಂಡಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು. ಆದರೆ, ಜಾಮೀನು ಅರ್ಜಿ ವಿಚಾರಣೆ ನಾಲೆಗೆ ಮುಂದೂಡಿಕೆ ಮಾಡಿದ ನ್ಯಾಯಾಲಯ ಮುನಿರತ್ನ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಇದೀಗ ಕುರುಕ್ಷೇತ್ರ ಚಿತ್ರದ ನಿರ್ಮಾಪಕ ಹಾಗೂ ಚಿತ್ರದಲ್ಲಿ ಧುರ್ಯೋಧನನ ಪಾತ್ರ ವಹಿಸಿದ ನಟ ದರ್ಶನ್ ತೂಗುದೀಪ ವಿಚಾರಣಾಧೀನ ಕೈದಿಯಾಗಿ ಜೈಲು ಪಾಲಾಗಿದ್ದಾರೆ. ಜೊತೆಯಲ್ಲಿ ಶಾಸಕ ಮುನಿರತ್ನ ರವರ ಮೂರು ದಿನ ಪೊಲೀಸ್ ಕಸ್ಟಡಿ ಮುಗಿದಿದ್ದು, ಪುನಃ ಕೋರ್ಟ್ ಮುಂದೆ ಹಾಜರುಪಡಿಸಿದಾಗ ನ್ಯಾಯಾಲಯದ ಸೆ.30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಒಟ್ಟಿನಲ್ಲಿ ಇವರಿಬ್ಬರಿಗೆ ಕುರುಕ್ಷೇತ್ರ ಸಿನಿಮಾ ಬಂದಾಗಿನಿಂದ ಸಂಕಷ್ಟ ಎದುರಾಗುತ್ತಲೇ ಬಂದಿರುವುದು ಆಶ್ಚರ್ಯಕರವಾದ ಸಂಗತಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular