Thursday, March 12, 2026
Flats for sale
Homeರಾಜ್ಯರಾಮನಗರ : ಮಾಗಡಿ ಬಳಿ ಭೀಕರ ರಸ್ತೆ ಅಪಘಾತ,ಐವರು ಸ್ಥಳದಲ್ಲೇ ಸಾವು..!

ರಾಮನಗರ : ಮಾಗಡಿ ಬಳಿ ಭೀಕರ ರಸ್ತೆ ಅಪಘಾತ,ಐವರು ಸ್ಥಳದಲ್ಲೇ ಸಾವು..!

ರಾಮನಗರ : ಮಾರುತಿ ಎರ್ಟಿಗಾ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಐವರು ಸಾವನಪ್ಪಿದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಭದ್ರಾಪುರ ಗ್ರಾಮದ ಸಮೀಪ ನಡೆದಿದೆ.ಮೃತರು ತುಮಕೂರು ಜಿಲ್ಲೆಯ ಕುಣಿಗಲ್ ಮೂಲದವರೆಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.

ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸ್ಥಳದಲ್ಲೇ ಸಾವನಪ್ಪಿದ್ದು ಮೃತದೇಹ ಹೊರತೆಗದು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕುದೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular