ಯಾದಗಿರಿ : ಖಾಸಗಿ ಶಿಕ್ಷಣ ಸಂಸ್ಥೆಯ ನಿರ್ಲಕ್ಷದಿಂದ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿರುವ ವಿದ್ಯಾರ್ಥಿ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪೂರ ನಗರದಲ್ಲಿರುವ ಡಿಡಿಯು ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಡಿಡಿಯು ಶಿಕ್ಷಣ ಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿರುವ ಚೇತನ್ ಎಂದು ತಿಳಿದುಬಂದಿದೆ.ಡಿಡಿಯು ಖಾಸಗಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಚೇತನ್ ಓದುತ್ತಿದ್ದ. ಅನಾರೋಗ್ಯ ಹಿನ್ನಲೆ ಕಳೆದ ಎರಡು ದಿನಗಳ ಹಿಂದೆ ಪೋಷಕರು, ವಿದ್ಯಾರ್ಥಿಯನ್ನು ಶಾಲೆಯ ವಸತಿ ನಿಲಯದಿಂದ ಮನೆಗೆ ಕರೆದುಕೊಂಡು ಹೋಗಿದ್ದರು.ಆದರೆ ಇಂದು ಶಾಲೆಯಲ್ಲಿ ಕಿರುಪರೀಕ್ಷೆ ಇರುವ ಕಾರಣ ಚೇತನ್ ಶಾಲೆಗೆ ಆಗಮಿಸಿದ್ದನು.ಪರೀಕ್ಷೆ ಬರೆಯುವವೇಳೆ ಚೇತನ್ ಗೆ ವಿಪರೀತ ಎದೆನೋವು ಕಾಣಿಸಿಕೊಂಡಿದ್ದುಅದೇ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಚೇತನ್ ಸಹೋದರಿ ಪವಿತ್ರಾಗೆ ಕರೆದು, ನನಗೆ ಹುಷಾರಿಲ್ಲದ ವಿಷಯವನ್ನು ಕರೆ ಮಾಡಿ ಪೋಷಕರಿಗೆ ತಿಳಿಸು ಎಂದಿದ್ದಾನೆ.ಆದರೆ ಪೋಷಕರಿಗೆ ಶಾಲೆಯ ಆಡಳಿತ ಮಂಡಳಿ ಫೋನ್ ಮಾಡದೇ ತಿಳಿಸದಿರುವುದರಿಂದ ಚೇತನ್ ನಿತ್ರಾಣಕ್ಕೆ ಬಂದು ಶಾಲೆಯಲ್ಲೇ ಕೊನೆಯುಸಿರೆಳೆದಿದ್ದಾನೆ.
ಮೃತಪಟ್ಟ ಬಳಿಕ ಬೈಕ್ ಮೇಲೆ ಸಹ ವಿದ್ಯಾರ್ಥಿಗಳು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಮೃತ ಚೇತನ ಎದೆ ನೋವು ಕಾಣಿಸಿಕೊಂಡರು ನಿಷ್ಕಾಳಜಿ ಶಿಕ್ಷಕರು ತೋರಿದ ಹಿನ್ನೆಲೆ ಮೃತಪಟ್ಟಿದ್ದಾನೆಂದು ಪೋಷಕರು ಆರೋಪಿಸಿದ್ದಾರೆ.ಬಳಿಕ ಶಹಾಪೂರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು ಆ ವೇಳೆ ಪ್ರಾಣಪಕ್ಷಿ ಹಾರಿಹೋಗಿದೆಂದು ವೈದ್ಯರು ತಿಳಿಸಿದ್ದಾರೆ.ಶಹಾಪೂರ ನಗರ ಪೋಲಿಸ್
ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣದ ತನಿಖೆ ನಡೆಯುತ್ತಿದೆ.