ಬೆಂಗಳೂರು : ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಲಡ್ಡೂಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂದು ಲ್ಯಾಬ್ ವರದಿ ದೃಢಪಡಿಸಿದೆ ಇದರಿಂದ ಕೋಟ್ಯನುಗಟ್ಟಲೆ ಭಕ್ತರ ನಂಬಿಕೆಗೆ ಗ್ರಾಸಉಂಟಾಗಿದೆ.ಹಿಂದೂಗಳ ಧಾರ್ಮಿಕ ಭಾವನೆಗಳಿಗೂ ದಕ್ಕೆ ಉಂಟಾಗಿದ್ದು ಭಕ್ತರು ಆಕ್ರೋಶಗೊಂಡಿದ್ದಾರೆ.
ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಶುದ್ಧ ನಂದಿನಿ ತುಪ್ಪ ಬಳಸುವಂತೆ ಆದೇಶ ಹೊರಡಿಸಲಾಗಿದೆ. ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಹಂದಿ ಮತ್ತು ದನದ ಕೊಬ್ಬಿನ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದ ದೇವಸ್ಥಾನಗಳಿಗೆ ಹೊಸ ಆದೇಶ ಹೊರಡಿಸಲಾಗಿದೆ. ದೇವಾಲಯಗಳಲ್ಲಿ ನಂದಿನಿ ತುಪ್ಪ ಮಾತ್ರ ಬಳಸುವಂತೆ ಆದೇಶಿಸಲಾಗಿದೆ. ದೇವಸ್ಥಾನ ದೀಪಗಳಿಗೆ, ಪ್ರಸಾದ ತಯಾರಿಕೆ, ದಾಸೋಹ ಭವನದಲ್ಲಿ ನಂದಿನಿ ತುಪ್ಪ ಬಳಸಬೇಕು ಎಂದು ಸೂಚನೆ ನೀಡಲಾಗಿದೆ. ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದ ಗುಣಮಟ್ಟ ಕಾಪಾಡುವಂತೆ ಎಚ್ಚರಿಕೆ ನೀಡಲಾಗಿದ್ದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಇದು ಅನ್ವಯವಾಗಲಿದೆ.


