ಮೈಸೂರು : ಇನ್ನೇನು ದಸರಾ ಉತ್ಸವ ಕೆಲವೇ ದಿನಗಳಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಅರಮನೆ ನಗರಿ ಮೈಸೂರಿನಲ್ಲಿ ರೇವ್ ಪಾರ್ಟಿ ಸದ್ದು ಜೋರಾಗಿದೆ ಅಕ್ಟೋಬರ್ 3 ರಂದು ಮೈಸೂರು ದಸರಾ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಆದರೆ, ಇದರ ನಡುವೆ ಮೈಸೂರು ಹೊರವಲಯದಲ್ಲಿ ರೇವ್ ಪಾರ್ಟಿ ನಡೆದಿದೆಯಾ ಅನುಮಾನ ವ್ಯಕ್ತವಾಗಿದೆ. ಕೆಆರ್ಎಸ್ ಬ್ಯಾಕ್ ವಾಟರ್ನಲ್ಲಿ ತಡರಾತ್ರಿವರೆಗೂ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಮೈಸೂರು ಪೊಲೀಸರಿಗೆ ಮಾಹಿತಿ ದೊರೆತಿದೆ.
ಕೆ.ಆರ್.ಎಸ್. ಹಿನ್ನೀರು ಪ್ರದೇಶದಲ್ಲಿರುವ ಮೀನಾಕ್ಷಿಪುರದಲ್ಲಿ ಉದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ಯುವತಿಯರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದರೆಂದು ಮಾಹಿತಿ ದೊರೆತ್ತಿದು ಖಾಸಗಿ ಜಮೀನಿನಲ್ಲಿ ಮಾದಕ ವಸ್ತುಗಳನ್ನ ಸೇವಿಸಿ ನಿಶೆಯಲ್ಲಿ ತೇಲಾಡುತ್ತಿದ್ದ 15ಕ್ಕೂ ಹೆಚ್ಚು ಯುವತಿಯರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆಂದು ತಿಳಿದುಬಂದಿದೆ.ಇಲವಾಲ ಪಿಎಸ್ಐ ಮಂಜುನಾಥ ನಾಯಕ್ ಅವರ ನೇತೃತ್ವದಲ್ಲಿ ಪೊಲೀಸರ ದಾಳಿ ನಡೆಸಿದ್ದು ಐವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆಡಿದ್ದಾರೆಂದು ಮಾಹಿತಿ ದೊರೆತಿದೆ.
ಈ ಬಗ್ಗೆ ರೇವ್ ಪಾರ್ಟಿಯಲ್ಲಿ ಯಾವುದೇ ಮಾದಕ ವಸ್ತು ಮಾದಕ ದ್ರವ್ಯ ಸಿಕ್ಕಿಲ್ಲ ಮದ್ಯ , ಸಿಗರೇಟ್ ಸ್ಥಳದಲ್ಲಿ ಇತ್ತು ಅಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು ಎಫ್ ಎಸ್ ಎಲ್ ತಂಡ ಸಹಾ ಭೇಟಿ ನೀಡಿ ಪರಿಶೀಲನೆ ವರದಿ ಬಂದ ನಂತರ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಸ್ ಪಿ ವಿಷ್ಣುವರ್ಧನ್ ಸ್ಪಷ್ಟನೆ ನೀಡಿದ್ದಾರೆ.
.