ಬೆಂಗಳೂರು ; ಮುಡಾ ಹಗರಣಕ್ಕೆ ಸಂಬAಧಿಸಿದAತೆ ಜಾರಿ ನಿರ್ದೇಶನಾಲಯ ೧೮ ಅಧಿಕಾರಿಗಳ ವಿರುದ್ಧ ಮತ್ತೊಂದು ಇಸಿಐಆರ್ (ಜಾರಿನಿರ್ದೇಶನಾಲಯ ಪ್ರಕರಣ ಮಾಹಿತಿ ವರದಿ) ದಾಖಲಿಸಿದೆ.
2022 ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣ ಕುರಿತಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ. ಹಿನಕಲ್ ಸರ್ವೆ ನಂ.89 ರಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿತ್ತು. 350 ಕ್ಕೂ ಹೆಚ್ಚು ಪ್ರಭಾವಿಗಳಿಗೆ 7.18 ಎಕರೆ ಜಮೀನನ್ನು ಹಂಚಿಕೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ 2017 ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 18 ಮಂದಿ ಅಧಿಕಾರಿಗಳ ಇಸಿಐಆರ್ ದಾಖಲಾಗಿದೆ. ನಿನ್ನೆಯಷ್ಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲಿಸಿತ್ತು. ಇದರ ಬೆನ್ನಲ್ಲೆ 18ಅಧಿಕಾರಿಗಳ ವಿರುದ್ಧ ಇಡಿ ಪ್ರಕರಣ ದಾಖಲಿಸಿದ್ದು, ಸಂಕಷ್ಟ ಎದುರಾಗಿದೆ.
ಕಾನೂನು ತಜ್ಞರ ಜತೆ ಚರ್ಚೆ
ಮುಖ್ಯಮಂತ್ರಿ ಸಿದ್ದರಾಮಯ್ಯರವರ ಪತ್ನಿ ನೀಡಿರುವ ೧೪ ನಿವೇಶನಗಳ ವಾಪಸ್ ಕುರಿತ ಪತ್ರವನ್ನು ಪಾರ್ವತಿ ಅವರ ಪುತ್ರ ಯತೀಂದ್ರ ಅವರು ಪತ್ರ ತಂದು ಕೊಟ್ಟಿದ್ದಾರೆ. ಈ ಬಗ್ಗೆ ಒಂದೆರೆಡಿ ದಿನಗಳಲ್ಲಿ ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಕಆನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಮುಡಾ ಆಯುಕ್ತ ರಘುನಂದನ್ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವ ಇಚ್ಛೆಯಿಂದ ನಿವೇಶನಗಳನ್ನು
ವಾಪಸ್ ಕೊಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ. ಕಾನೂನು ಪ್ರಕಾರ ಮುಂದಿನ ಕ್ರಮಕೈಗೊಳ್ಳುತ್ತೇನೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಕಾಯ್ದೆ ಪ್ರಕಾರ ಒಮ್ಮೆ ಒಬ್ಬರಿಗೆ ಖಾತೆ ಮಾಡಿಕೊಟ್ಟರೆ ಅದರ ಸಂಪೂರ್ಣ ಮಾಲೀಕರು ಅವರೇ ಆಗುತ್ತಾರೆ. ಹೀಗಾಗಿ ನಿವೇಶನ ವಾಪಸ್ ಪಡೆಯಲು ಅವಕಾಶ ಇದೆ ಎಂಬುದನ್ನು ಕಾನೂನು ತಜ್ಞರ ಜತೆ ಚರ್ಚಿಸಿ ಅದರಂತೆ ಮುAದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ತಾವು ಮುಡಾ ಆಯುಕ್ತರಾಗಿರುವುದು ಇದೇ ಮೊದಲು. ಇಂತಹ ಪ್ರಕರಣ ಮೊದಲ ಬಾರಿ ನೋಡುತ್ತಿದ್ದೇನೆ ಎಂದರು.
ಇಡಿ ದಾಖಲೆ ಕೇಳಿಲ್ಲ
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕೆಲವು ದಾಖಲೆಗಳನ್ನು ಕೇಳಿ ಪತ್ರ ಬರೆದು ತನಿಖೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ. ಆದರೆ, ಇಡಿ ಕಡೆಯಿಂದ ಯಾವುದೇ ದಾಖಲೆ ಕೇಳಿಲ್ಲ. ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ಮುಡಾದ ಕೆಲ ಸಿಬ್ಬಂದಿಗಳನ್ನೂ ಕೂಡ ಲೋಕಾಯುಕ್ತರ ಸಹಾಯಕ್ಕೆ ಬಳಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.


