Thursday, November 6, 2025
Flats for sale
Homeರಾಜ್ಯತುಮಕೂರು : ಬಾಪೂಜಿ ಪ್ರಬಂಧ ಸ್ಪರ್ಧೆಃ ಸಚಿವರಿಂದ ವಿಜೇತರಿಗೆ ನಗದು ಬಹುಮಾನ ವಿತರಣೆ.

ತುಮಕೂರು : ಬಾಪೂಜಿ ಪ್ರಬಂಧ ಸ್ಪರ್ಧೆಃ ಸಚಿವರಿಂದ ವಿಜೇತರಿಗೆ ನಗದು ಬಹುಮಾನ ವಿತರಣೆ.

ತುಮಕೂರು : ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಣೆ ಮಾಡಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತಿç ಜಯಂತಿ ಹಾಗೂ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ನಂತರ ಬಹುಮಾನ ವಿತರಣೆ ಮಾಡಿದರು.

ಪ್ರೌಢ ಶಾಲಾ ವಿಭಾಗದಲ್ಲಿ ಹನುಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ದೀಕ್ಷಿತ ಪ್ರಥಮ, ಅಮೃತೂರು ಕೆ.ಪಿ.ಎಸ್ ವಿದ್ಯಾರ್ಥಿ ಎನ್.ಎನ್. ಹಿಮಾನಿ ದ್ವಿತೀಯ, ಅಂಕಸಂದ್ರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಎ. ಪಿ. ಅಶ್ವಿನಿ ತೃತೀಯ ಸ್ಥಾನ; ಪದವಿ ಪೂರ್ವ ಕಾಲೇಜು ವಿಭಾಗದಿಂದ ಸಿರಾ ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜಿನ ಎಸ್.ಎಂ. ಗುಣಶ್ರೀ ಪ್ರಥಮ, ತುರುವೇಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಚ್.ಎನ್. ಇಂಚರ ದ್ವೀತಿಯ, ತುಮಕೂರು ದಿ ಮಾಸ್ಟರ್ಸ್ ಪದವಿ ಪೂರ್ವ ಕಾಲೇಜಿನ ಆರ್. ವೆಂಕಟ್ ತೇಜ್ ತೃತೀಯ ಸ್ಥಾನ; ಪದವಿ ವಿಭಾಗದಿಂದ ತುಮಕೂರು ವಿಶ್ವವಿದ್ಯಾಲಯದ ಎಂ. ಎ ಪ್ರಥಮ ವರ್ಷದ ಶರಣಪ್ಪ ಪ್ರಥಮ, ಎಸ್. ಕೆ. ಸುಪ್ರೀತ ದ್ವಿತೀಯ, ಹೆಚ್.ಡಿ. ಸಂತೋಷ್ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸಚಿವರು ನಗದು ಬಹುಮಾನ, ಪ್ರಮಾಣಪತ್ರ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ , ವಾರ್ತಾ ಇಲಾಖೆಯ ಅಧಿಕಾರಿ ಹಿಮಂತರಾಜು.ಜಿ, ಸೇರಿದಂತೆ ಪೌರ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತಿತರರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular