ಮೈಸೂರು ; ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ರೈಲು ಸಂಖ್ಯೆ 12578 ಮೈಸೂರು-ದರ್ಭಾಂಗ ಬಾಗಮತಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಮೈಸೂರಿನಿಂದ ದರ್ಭಾಂಗ್ ಮಾರ್ಗವಾಗಿ ಹೋಗುತ್ತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಸ್ಥಳಕ್ಕೆ ಶೀಘ್ರದಲ್ಲೇ ರಕ್ಷಣಾ ಪಡೆ ಆಗಮಿಸಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲೂಪ್ ಲೈನ್ನಲ್ಲಿ ಪ್ರವೇಶಿಸಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
ತಮಿಳುನಾಡು ಪೊಲೀಸರ ಪ್ರಕಾರ, ರೈಲಿನ ಕನಿಷ್ಠ ಎರಡು ಬೋಗಿಗಳು ಹಳಿ ತಪ್ಪಿವೆ. ರಕ್ಷಣಾ ತಂಡಗಳು ಮತ್ತು ಆಂಬ್ಯುಲೆನ್ಸ್ಗಳು ಅಪಘಾತದ ಸ್ಥಳಕ್ಕೆ ಧಾವಿಸಿವೆ. 12578 ಮೈಸೂರು-ದರ್ಭಾಂಗ ಎಕ್ಸ್ಪ್ರೆಸ್ ಕವರಾಯಪೆಟ್ಟೈಯಲ್ಲಿ ರಾತ್ರಿ 8.50 ಕ್ಕೆ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು. ರಕ್ಷಣಾ ಕಾರ್ಯ ನಡೆಯುತ್ತಿದೆ.
ಅಪಘಾತಕ್ಕೆ ಸಂಬಂಧಿಸಿದಂತೆ ತಿರುವಳ್ಳೂರು ಜಿಲ್ಲಾಧಿಕಾರಿ ಟಿ.ಪ್ರಭುಶಂಕರ್ ಮಾತನಾಡಿ, ರಕ್ಷಣಾ ಕಾರ್ಯಚಾರಣೆ ನಡೆಯುತ್ತಿದ್ದು, ಸಾವು-ನೋವಿನ ಬಗ್ಗೆ ಯಾವುದೇ ರೀತಿಯ ಮಾಹಿತಿ ಲಭಿಸಿಲ್ಲ ಎಂದು ತಿಳಿಸಿದ್ದಾರೆ.
ರೈಲು ಸಂಖ್ಯೆ 12578 (ಮೈಸೂರಿನಿಂದ ದರ್ಭಾಂಗ ಎಕ್ಸ್ಪ್ರೆಸ್) MAS ವಿಭಾಗದ ಕವರೈಪೆಟ್ಟೈ ನಿಲ್ದಾಣವನ್ನು ಹಾದುಹೋಗುವಾಗ ಕೆಲವು ಬೋಗಿಗಳು ಹಳಿತಪ್ಪಿದ್ದು ಹಲವರು ಗಾಯಗೊಂಡಿದ್ದಾರೆ.
- ಬೆಂಗಳೂರು ಕಂಟ್ರೋಲ್ ರೂಂನಲ್ಲಿ ಸಹಾಯವಾಣಿಯೊಂದಿಗೆ ವಾರ್ ರೂಮ್ ಅನ್ನು ಸ್ಥಾಪಿಸಲಾಗಿದೆ ಮತ್ತು Ph 08861309815 ನಲ್ಲಿ ಸಂಪರ್ಕಿಸಬಹುದು.
- ಎಸ್ಬಿಸಿ, ಎಂವೈಎ ಮತ್ತು ಕೆಜಿಐ ರೈಲು ನಿಲ್ದಾಣದಲ್ಲಿ ಸ್ಥಾಪಿಸಲಾದ ಸಹಾಯ ಕೇಂದ್ರವನ್ನು ತೆರೆಯಲಾಗಿದೆ.