Thursday, July 23, 2026
Homeರಾಜ್ಯಬೆಂಗಳೂರು : ರಾಜ್ಯದ 18 ಜಿಲ್ಲೆಗಳಲ್ಲಿ ಅಕ್ಟೋಬರ್ 17ರವರೆಗೆ ಭಾರೀ ಮಳೆ,ಯೆಲ್ಲೋ- ಆರೆಂಜ್ ಅಲರ್ಟ್ ಘೋಷಣೆ...

ಬೆಂಗಳೂರು : ರಾಜ್ಯದ 18 ಜಿಲ್ಲೆಗಳಲ್ಲಿ ಅಕ್ಟೋಬರ್ 17ರವರೆಗೆ ಭಾರೀ ಮಳೆ,ಯೆಲ್ಲೋ- ಆರೆಂಜ್ ಅಲರ್ಟ್ ಘೋಷಣೆ : ಹವಾಮಾನ ಇಲಾಖೆ.

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ನಿರಂತರ ಭಾರಿ ಮಳೆಯಾಗುತ್ತಿದ್ದು ಅ. 16ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ ಹಾಗೂ ಹಾವೇರಿ,ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

ಇನ್ನೂ ಎರಡು,ಮೂರು ದಿನಗಳಲ್ಲಿ ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶ ಪ್ರದೇಶದಲ್ಲೂ ವಾಯುಭಾರ ಕುಸಿತ ಸಾಧ್ಯತೆ ಇದೆ. ಪರಿಣಾಮ ಕರಾವಳಿ, ದಕ್ಷಿಣ ಒಳನಾಡಿನಲ್ಲಿ 17ರ ವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ C.S.ಪಾಟೀಲ್‌ ಮಾಹಿತಿ ನೀಡಿದ್ದಾರೆ.

ಮಂಗಳೂರು ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಜೋರು ಗಾಳಿ ಸಹ ಬೀಸುತ್ತಿದೆ. ಮಧ್ಯಾಹ್ನದ ನಂತರ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular