Thursday, November 21, 2024
Flats for sale
Homeದೇಶಶ್ರೀನಗರ : ಜಮ್ಮು- ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಂತ್ಯ..!

ಶ್ರೀನಗರ : ಜಮ್ಮು- ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಂತ್ಯ..!

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟçಪತಿ ಆಳ್ವಿಕೆ ಹಿಂಪಡೆದು ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಈ ಮೂಲಕ ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ದಾರಿಮಾಡಿಕೊಟ್ಟಿದೆ. ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019 ರ 34 ಸೆಕ್ಷನ್ 73 ರ ಮೂಲಕ ನೀಡಲಾದ ಅಧಿಕಾರಗಳ ಅನುಷ್ಠಾನದಲ್ಲಿ, ಭಾರತದ ಸಂವಿಧಾನದ 239 ಮತ್ತು 239ಎ ವಿಧಿಗಳೊಂದಿಗೆ ರಾಷ್ಟ್ರಪತಿ ಆಡಳಿತ ಹಿಂಪಡೆಯಲಾಗಿದೆ.

2019 ರ . 31ನೇ ಅಕ್ಟೋಬರ್ 2019 ರ ಆದೇಶ ಜಮ್ಮು ಮತ್ತು ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019ರ ಸೆಕ್ಷನ್ 54 ರ ಅಡಿಯಲ್ಲಿ ಮುಖ್ಯಮಂತ್ರಿ ಅಧಿಕಾರ ಸ್ವೀಕಾರಕ್ಕೂ ಮುನ್ನವೇ ಕಾಶ್ಮೀರದ ಮೇಲೆ ರಾಷ್ಟçಪತಿ ಆಳ್ವಿಕೆ ಅಧಿಕಾರವನ್ನು ಹಿಂಪಡೆಯಲಾಗಿದೆ ಎಂದು ರಾಷ್ಟçಪತಿ ದ್ರೌಪದಿ ಮುರ್ಮು ಸಹಿ ಮಾಡಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದ್ದು, ಸರ್ಕಾರ ರಚನೆಗೆ ಸಜ್ಜಾಗಿದೆ. ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಎನ್‌ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಆಯ್ಕೆಯಾಗಿದ್ದು, ಅಧಿಕಾರ ಸ್ವೀಕರಿಸಲು ಸಕಲ ತಯಾರಿ ನಡೆಸಿದ್ದಾರೆ.

ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂದು
ಕೇAದ್ರಾಡಳಿತ ಪ್ರದೇಶಗಳಾಗಿ ಔಪಚಾರಿಕವಾಗಿ ವಿಭಜಿಸಿದ ನಂತರ 2019 ರ ಅ.31 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟçಪತಿ ಆಡಳಿತ ಹೇರಲಾಯಿತು. ನಂತರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ ೩೭೦ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು.

2019ರ ಅ.31ಕ್ಕೂ ಮುನ್ನ ಬಿಜೆಪಿಯು ಪಿಡಿಪಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿAಪಡೆದಿತ್ತು. ಬಳಿಕ ಅಂದಿನ ಮುಖ್ಯಮAತ್ರಿ ಮೆಹಬೂಬಾ ಮುಫ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ 2017ರ ರಿಂದ ಕೇAದ್ರ ಆಡಳಿತ ಮುಂದುವರಿದಿತ್ತು.

RELATED ARTICLES

LEAVE A REPLY

Please enter your comment!
Please enter your name here

Most Popular