ಬೆಂಗಳೂರು : ಅತ್ಯಾಚಾರ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದ ಮುನಿರತ್ನಗೆ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮುನಿರತ್ನ ಅವರಿಗೆ ಒಂದು ತಿಂಗಳ ಬಳಿಕ ಜಾಮೀನು ಸಿಕ್ಕಿದೆ. ಹನಿಟ್ರ್ಯಾಪ್, ಜಾತಿ ನಿಂದನೆ ಹಾಗೂ ಅತ್ಯಾಚಾರ ಕೇಸ್‌ಅನ್ನು ಅವರ ಮೇಲೆ ಹೊರಿಸಲಾಗಿತ್ತು. ಜಾತಿ ನಿಂದನೆ ಕೇಸ್‌ನಲ್ಲಿ ಈಗಾಗಲೇ ಮುನಿರತ್ನ ಅವರಿಗೆ ಜಾಮೀನು ಸಿಕ್ಕಿತ್ತು. ಅದರೆ, ಅವರು ಬಿಡುಗಡೆ ಆಗುತ್ತಿರುವ ಹೊತ್ತಿನಲ್ಲಿಯೇ ರೇಪ್ ಕೇಸ್‌ನಲ್ಲಿ ಪೊಲೀಸರು ಇವರನ್ನು ಬಂಧಿಸಿದ್ದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುನಿರತ್ನ ಅವರನ್ನು ಬೆಂಗಳೂರು ಪೊಲೀಸರು ಸೆಪ್ಟೆಂಬರ್ 14 ರಂದು ರಾತ್ರಿ ಕಸ್ಟಡಿಗೆ ತೆಗೆದುಕೊಂಡಿದ್ದರು. ಕೋಲಾರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಬಿ ನಿಖಿಲ್ ಅವರ ಪ್ರಕಾರ, ಆಂಧ್ರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದಾಗ ಕೋಲಾರ ಪೊಲೀಸರ ಸಹಾಯದಿಂದ ಬೆಂಗಳೂರು ಪೊಲೀಸರು ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಬಳಿಕ ಮುನಿರತ್ನ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು. ಅದ್ರ, ಅಲ್ಲಿಯೇ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಮುನಿರತ್ನ ಬಂಧನವಾಗಿತ್ತು.ಇಂದು (ಅಕ್ಟೋಬರ್ 15) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.