ಮಂಡ್ಯ : ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಆವರಣದಲ್ಲಿ ಅದ್ಧೂರಿ ಸಮಾರಂಭ ಏರ್ಪಡಿಸಲಾಗಿದ್ದು ಸಮೃದ್ದ ಬೆಂಗಳೂರು ಧ್ಯೇಯವಾಕ್ಯದ ಅಡಿಯಲ್ಲಿ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಲಾಗಿದೆ.
ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ ಜೈಕಾ ಸಂಸ್ಥೆಯ ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೊಂಡಿರುವ ಈ ಯೋಜನೆಗೆ ನೀರು ಶುದ್ದೀಕರಣ ಘಟಕದ ಬಟನ್ ಪ್ರೆಸ್ ಮಾಡುವ ಮೂಲಕ ಚಾಲನೆ ನೀಡಲಾಯಿತು. ಬೆಂಗಳೂರಿಗೆ ಪ್ರತಿನಿತ್ಯ 2,250 ಎಂ.ಎಲ್.ಡಿಯಷ್ಟು ನೀರು ಬೇಕು. ಸಧ್ಯ ಕೇವಲ 1450 ಎಂ.ಎಲ್.ಡಿಯಷ್ಟು ಮಾತ್ರ ಸರಬರಾಜು ಆಗ್ತಿದೆ. ಹೀಗಾಗಿ ಕಾವೇರಿ 5ನೇ ಹಂತ ಭಾರಿ ಅನಿವಾರ್ಯವಾಗಿತ್ತು. ಸಧ್ಯ ಇದರಿಂದ 775 ಎಂ.ಎಲ್.ಡಿಯಷ್ಟು ನೀರನ್ನ ಸರಬರಾಜು ಮಾಡಬಹುದು.
ಯೋಜನೆಯನ್ನು ಲೋಕಾರ್ಪಣೆಗೊಳಿಸುವುದಕ್ಕೂ ಮುನ್ನ ಚಂಡಿಕಾ ಹೋಮ, ಗಣಪತಿ ಪೂಜೆ, ಯಜಮಾನ ಸಂಕಲ್ಪ, ಮಹಾ ಸುದರ್ಶನ ಚಕ್ರ ಪೂಜೆ, ಸುದರ್ಶನ ಹೋಮ, ಮಹಾಚಂಡಿ ಕಳಾಸರಾಧನೆ, ಮಹಮಂಗಳಾರತಿ ನೆರವೇರಿಸಲಾಯಿತು. ಮಹಾಸಂಕಲ್ಪ, ಚಂಡಿ ನವ ಬ್ರಹ್ಮ ಪೂಜೆ, ದುರ್ಗಾ ಸಪ್ತ ಸತಿ ನಾರಾಯಾಣ ಸೇರಿದಂತೆ 13 ಅಧ್ಯಾಯ, ಗಂಗಾ, ಯಮುನಾ, ಸರಸ್ವತಿ, ನರ್ಮದಾ, ಸಿಂಧು, ಕಾವೇರಿ ಮೊದಲಾದ ಸಪ್ತ ನದಿಗಳ ಕಳಸ ಸ್ಥಾಪನೆ ಮಾಡಿ ಪೂಜೆ ಸಲ್ಲಿಸಲಾಯಿತು. ಮಹಾ ಪೂರ್ಣಾವತಿ, ಮಂಗಳ ದ್ರವ್ಯ ಸಮರ್ಪಣೆ ಮಹಾ ಮಂಗಳಾರತಿ ಸೇರಿ ಹೋಮ-ಹವನ ನೆರವೇರಿಸಲಾಯತು.
ಬೆಂಗಳೂರಿಗರಿಗೆ ಅನುಕೂಲವಾಗಲಿರುವ ಮಹತ್ವಾಕಾಂಕ್ಷೆ ಯೋಜನೆ 5ನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಲೋಕಾರ್ಪಣೆಗೊಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿಯ ಯೋಜನೆ ಇದಾಗಿದೆ.
ಇಂದು ಈ ಯೋಜನೆ ಇಡೀ ನಾಡಿಗೆ ಸಮರ್ಪಣೆಯಾಗಿದೆ.ಈ ಯೋಜನೆಯಿಂದಾಗಿ ಬೆಂಗಳೂರನ್ನ ಇಡೀ ಪ್ರಪಂಚವೇ ನೋಡುವಂತಾಗಿದೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆ ಇದೆ ಎಂಬುದನ್ನು ಈ ಯೋಜನೆಯಿಂದ ಸಾಭೀತಾಗಿದೆ ಎಂದು ಮಚ್ಚುಗೆ ವ್ಯಕ್ತಪಡಿಸಿದರು. ನಮ್ಮ ಸರ್ಕಾರ ಕೇವಲ ಭಾವನಾತ್ಮಕವಾಗಿ ಜನರ ಬಳಿ ಹೋಗಲ್ಲ. ನಾವು ಕೆಲಸ ಮಾಡುವ ಮೂಲಕ ಹೋಗುತ್ತೇವೆ ಎಂದರು.ಈ ಯೋಜನೆ 2014ರಲ್ಲಿ ಆರಂಭ ಮಾಡಲಾಗಿತು. ಆದರೆ ಇಂದು ನಮ್ಮ ಸಿದ್ದರಾಮಯ್ಯನವರೆ ಉಧ್ಘಾಟನೆ ಮಾಡುತ್ತಿದ್ದಾರೆ. ಅವರಿಗೆ ಒಂದು ಬದ್ಧತೆ ಇದೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದರು.
ತುಂಗಾ ಭದ್ರ ಡ್ಯಾಮ್ ವಿಚಾರವಾಗಿ ನಮ್ಮ ಸರ್ಕಾರದ ವಿರುದ್ದ ಟೀಕೆ ಮಾಡಿದ್ರು.ಆದರೆ ಐದೇ ದಿನದಲ್ಲಿ ದುರಸ್ತಿ ಕಾರ್ಯ ನಾವು ಮಾಡಿದ್ದೇವೆ.ವಿಸಿ ನಾಲೆ ಆಧುನಿಕರಣಕ್ಕೆ ಸಿಎಂ, ಡಿಸಿಎಂ ಅನುದಾನ ಬಿಡುಗಡೆ ಮಾಡಬೇಕು.ಬಿಡಿಎಯಿಂದ 5 ಸಾವಿರ ಕೋಟಿಯ ವಿಶೇಷ ಅನುದಾನಕ್ಕೆ ಮಾಡಬೇಕೆಂದು ಮನವಿ ಮಾಡಿದರು.