Sunday, March 8, 2026
Flats for sale
Homeಜಿಲ್ಲೆಉಳ್ಳಾಲ : ಆಟೋ ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿ ಶಾಲಾ ಬಾಲಕಿ ಸಾವು..!

ಉಳ್ಳಾಲ : ಆಟೋ ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿ ಶಾಲಾ ಬಾಲಕಿ ಸಾವು..!

ಉಳ್ಳಾಲ : ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ವರ್ಷದ ಶಾಲಾ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾ ಮತ್ತು ಪಿಕ್ ಅಪ್ ವಾಹನದ ನಡುವೆ ಈ ಅಪಘಾತ ಸಂಭವಿಸಿದೆ.

ಬಡಕಬೈಲು ನಿವಾಸಿ ಮೊಹಮ್ಮದ್ ಬಿ ಮೋನು ಮತ್ತು ಮುನ್ಹಿಯಾ ದಂಪತಿಯ ಪುತ್ರಿ ಆಯಿಷಾ ವಹೀಬಾ ಮೃತಪಟ್ಟ ಕಂದಮ್ಮ . ದೇರ್ಲಕಟ್ಟೆಯ ನೇತಾಜಿ ಶಾಲೆಗೆ ವಿದ್ಯಾರ್ಥಿಗಳನ್ನು ಬಿಡಲು ಆಟೋರಿಕ್ಷಾ ತೆರಳುತ್ತಿದ್ದಾಗ ಅಜಾಗರೂಕತೆಯಿಂದ ಚಾಲನೆ ಮಾಡಿದ ಪಿಕಪ್ ವಾಹನ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.

ತೀವ್ರವಾಗಿ ಗಾಯಗೊಂಡಿದ್ದ ಆಯಿಷಾ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೂರ್ನಾಲ್ಕು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಆಟೋರಿಕ್ಷಾ ಚಾಲಕ ಕೂಡ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಆಟೋರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳೆಗಿನ ಜಾವದಲ್ಲಿ ಮಕ್ಕಳು ಶಾಲೆಗೆ ಹೊರಡುವ ಸಮಯದಲ್ಲಿ ಅನೇಕ ವಾಹನಗಳು ಅತಿವೇಗ ಹಾಗೂ ಅಜಾಗೂರಕತೆಯಿಂದ ಚಲಾಯಿಸುವುದು ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಸರಿಯಾದ ಕಟ್ಟುನಿಟ್ಟಿನ ಕ್ರಮವಹಿಸಿ್ದರೆ ಪ್ರತಿನಿತ್ಯ ಬೆಳ್ಳಂಬೆಳಗ್ಗೆ ಶಾಲೆಗೆ ಹೊರಡುವ ಮಕ್ಕಳ ಜೀವನವು ಸುಗಮವಾಗಿರುತ್ತದೆಂದು ಪೋಷಕರ ಮಾತು .

RELATED ARTICLES

LEAVE A REPLY

Please enter your comment!
Please enter your name here

Most Popular