ಮಂಗಳೂರು : ತಮಿಳುನಾಡು, ಕೇರಳ, ಅಸ್ಸಾಂ, ಕರ್ನಾಟಕ, ದೆಹಲಿ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಅಮೆಜಾನ್ ಕಂಪನಿಯ ಆನ್ಲೈನ್ ಮೂಲಕ ವಿವಿಧ ರೀತಿಯ ಬೆಲೆಬಾಳುವ ಸಾಮಾಗ್ರಿಗಳನ್ನು ಖರೀದಿಸಿ ವಂಚನೆ ಮಾಡುತಿದ್ದ ಖತರ್ನಾಕ್ ಖದೀಮರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಂಧಿತರನ್ನು ರಾಜಸ್ಥಾನದ ಧೋಪುರ್ ಜಿಲ್ಲೆಯ ನಿವಾಸಿ ರಾಜ್ ಕುಮಾರ್ ಮೀನಾ (23), ಕರೌಲಿ ಜಿಲ್ಲೆಯ ಸುಭಾಸ್ ಗುರ್ಜರ್ (27) ಎಂದು ಗುರುತಿಸಲಾಗಿದೆ.
ಆರೋಪಿಗಳು ಅಮೆಜಾನ್ನಲ್ಲಿ ವಿವಿಧ ರೀತಿಯ ಬೆಲೆಬಾಳುವ ಸಾಮಗ್ರಿಗಳನ್ನು ಆರ್ಡರ್ ಮಾಡುತ್ತಿದ್ದರು. ವಸ್ತುಗಳ ಡಿಲೇವರಿ ಪಡೆಯಲು ಟೈಯರ್ ಟು ಸಿಟಿ ಲೋಕೆಷನ್ ಆಯ್ಕೆ ಮಾಡುತ್ತಿದ್ದರು. ಬುಕ್ ಮಾಡಿದ ವಸ್ತುಗಳನ್ನು ಡೆಲಿವರಿ ಪಡೆಯಲು ಆರೋಪಿಗಳು ವಿಮಾನದಲ್ಲಿ ಹೋಗುತ್ತಿದ್ದರು. ವಸ್ತುವಿನ ಬಾಕ್ಸ್ ಮೇಲಿನ ಟ್ರ್ಯಾಕಿಂಗ್ ಐಡಿಯನ್ನು ಅದಲು ಬದಲು ಮಾಡಿ ಅಮೆಜಾನ್ ಸಂಸ್ಥೆಗೆ ವಂಚಿಸುತಿದ್ದರು.ವಸ್ತುಗಳು ಡೆಲವರಿಯಾದ ಬಳಿಕ, ಅದರ ಮೇಲಿನ ಟ್ರ್ಯಾಕಿಂಗ್ ಲೇಬಲ್ಗಳನ್ನು ಅದೇ ರೀತಿಯ ಕಡಿಮೆ ಬೆಲೆಯ ವಸ್ತುಗಳ ಬಾಕ್ಸ್ ಮೇಲೆ ಹಚ್ಚುತ್ತಿದ್ದರು. ನಂತರ, ರಿಟರ್ನ್ ಮಾಡುತ್ತಿದ್ದರು. ದುಬಾರಿ ಬೆಲೆಯ ವಸ್ತುಗಳನ್ನು ತಮ್ಮಲ್ಲೇ ಇಟ್ಟುಕೊಂಡು ವಂಚಿಸುತ್ತಿದ್ದರು.ದುಬಾರಿ ಬೆಲೆಯ ವಸ್ತುಗಳನ್ನು ಸೆಕೆಂಡ್ ಹ್ಯಾಂಡ್ಗೆ ಮಾರಾಟ ಮಾಡುತ್ತಿದ್ದರು. ಐಟಂ ರಿಟರ್ನ್ ಆದ ಬಳಿಕ ಆರ್ಡರ್ಗೆ ಬಳಸಿದ ಸಿಮ್ ಕಿತ್ತೆಸೆಯುತ್ತಿದ್ದರು. ವಸ್ತು ಅಮೇಜಾನ್ ಗೋಡಾನ್ ತಲುಪಿದ ಬಳಿಕ ವಂಚನೆ ಬೆಳಕಿಗೆ ಬರುತ್ತಿತ್ತು.
ಖತರ್ನಾಕ್ ಕ್ರಿಮಿನಲ್ಸ್ ಹಿಡಿಯಲು ಬಲೆ ಬೀಸಿದ ಪೊಲೀಸರು ಕೊನೆ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದು ಮಂಗಳೂರಿನ ಉರ್ವಾ ಠಾಣೆಯಲ್ಲಿ ಸೆ.21ರಂದು ಪ್ರಕರಣ ದಾಖಲಿದೆ.


