Thursday, July 23, 2026
Homeರಾಜ್ಯಚಿಕ್ಕಬಳ್ಳಾಪುರ : ದೀಪಾವಳಿ ಹಬ್ಬಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಯುವತಿ ಸೇರಿ ಮೂವರು ನೀರಿನಲ್ಲಿ ಮುಳುಗಿ...

ಚಿಕ್ಕಬಳ್ಳಾಪುರ : ದೀಪಾವಳಿ ಹಬ್ಬಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಯುವತಿ ಸೇರಿ ಮೂವರು ನೀರಿನಲ್ಲಿ ಮುಳುಗಿ ಸಾವು .

ಚಿಕ್ಕಬಳ್ಳಾಪುರ : ದೀಪಾವಳಿ ಹಬ್ಬದ ಪ್ರಯುಕ್ತ ಸಂಬಂದಿಕರ ಮನೆಗೆ ಬಂದಿದ್ದ ಮೂವರು ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ರಂಜಿತ್(27), ರಮ್ಯಾ(24), ಅಭಿಲಾಶ್(21) ಎಂದು ತಿಳಿದುಬಂದಿದೆ. ದೀಪಾವಳಿ ವೇಳೆ ಹಬ್ಬಕ್ಕೆ ಊರಿಗೆ ಅಂತ ಬಂದಿದ್ದ ಯುವತಿ ಯುವಕರು ಈಜಲು ಹೋಗಿದ್ದಾರೆ. ಊಟದ ನಂತರ ಈಜಾಡಲು ಕೆರೆಗೆ ಇಳಿದಿದ್ದಾರೆ. ಆದರೆ ಆಳ ಅರಿಯದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸ್ಥಳೀಯರು, ಆಗ್ನಿಶಾಮಕ ದಳ ಸಿಬ್ಬಂದಿ ನೆರವಿನೊಂದಿಗೆ ಮೃತ ದೇಹಗಳನ್ನು ಹೊರ ತೆಗೆದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular