ಬೆಂಗಳೂರು ; ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸರ್ಕಾರ ವಾಹನ ಮಾಲೀಕರಿಗೆ ಮತ್ತೆ ಮತ್ತೆ ಅವಕಾಶ ನೀಡುತ್ತಲೇ ಬಂದಿದೆ. ಬರೋಬ್ಬರಿ ನಾಲ್ಕು ಬಾರಿ ಗಡುವು ವಿಸ್ತರಿಸಿದೆ. ಆದರೂ ಸಹ 1.90 ಕೋಟಿ ಹಳೆ ವಾಹನಗಳ ಪೈಕಿ 55 ಲಕ್ಷ ವಾಹನಗಳಿಗೆ ಮಾತ್ರ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ.
ಬರೋಬ್ಬರಿ 4 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿದೆ. ಒಂದು ವೇಳೆ ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದಿದ್ದರೆ ಡಿಸೆಂಬರ್ 1ರಿಂದ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ. ಹೀಗಾಗಿ 2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕಿದೆ.
ಇನ್ನೂ ತಮ್ಮ ತಮ್ಮ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆ ಮಾಡದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈಗಾಗಲೇ ರಾಜ್ಯ ಸರ್ಕಾರ, HSRP ಕೊನೆ ದಿನಾಂಕವನ್ನು ವಿಸ್ತರಿಸುತ್ತಾ ಬಂದಿದೆ. ಇದೀಗ ಮತ್ತೆ ಹಳೆಯ ನಂಬರ್ ಪ್ಲೇಟ್‌ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಣೆ ಮಾಡಿದೆ. ಗಡುವು ವಿಸ್ತರಿಸಿ ಒಟ್ಟಿನಲ್ಲಿ ಜನಸಾಮಾನ್ಯರು ತಲೆಕೆಡಿಸಿಕೊಳ್ಳದೆ ಕೊನೆಗೆ ೧೦೦೦ ದಂಡ ಕಟ್ಟುವಾಗ ಕಂಗಾಲಾಗುವುದಂತೂ ನಿಜವಾದ ಸಂಗತಿ.