ಜೋಹಾನ್ಸ್ ಬಾರ್ಗ್ : ದಕ್ಷಿಣ ಆಫ್ರಿಕಾ ವಿರುದ್ಧದ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ತಿಲಕ್ ವರ್ಮಾ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಎರಡು ಭರ್ಜರಿ ದಾಖಲೆಗಳನ್ನು ಯುವ ಎಡಗೈ ದಾಂಡಿಗ ತಮ್ಮದಾಗಿಸಿಕೊಂಡಿದ್ದಾರೆ.
ಬ್ಯಾಟಿಂಗ್, ಬೌಲಿಂಗ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಚೆಂಡಾಡಿದ ಭಾರತ ದಾಖಲೆಯ 135 ರನ್‌ಗಳ ಜಯದೊಂದಿಗೆ 4 ಪಂದ್ಯಗಳ ಟಿ 20 (T20) ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ.
ಗೆಲ್ಲಲು 284 ರನ್‌ಗಳ ಕಠಿಣ ಸವಾಲನ್ನು ಪಡೆದ ದಕ್ಷಿಣ ಆಫ್ರಿಕಾ 18.2 ಓವರ್‌ಗಳಲ್ಲಿ 148 ರನ್‌ಗಳಿಗೆ ಸರ್ವಪತನ ಕಂಡಿತು.
ಆಫ್ರಿಕಾ ಪರವಾಗಿ ಸ್ಟಬ್ಸ್ 43 ರನ್ (29 ಎಸೆತ, 3 ಬೌಂಡರಿ, 2 ಸಿಕ್ಸ್) ಹೊಡೆದರೆ ಡೇವಿಡ್ ಮಿಲ್ಲರ್ 36 ರನ್(27 ಎಸೆತ, 2 ಬೌಂಡರಿ, 3 ಸಿಕ್ಸ್) , ಮಾರ್ಕೊ ಜಾನ್ಸೆನ್ ಔಟಾಗದೇ 29 ರನ್(12 ಎಸೆತ, 2 ಬೌಂಡರಿ, 3 ಸಿಕ್ಸ್) ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು.
ಆರ್ಶ್‌ದೀಪ್ ಸಿಂಗ್ 3 ವಿಕೆಟ್ ಕಿತ್ತರೆ ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್, ಹಾರ್ದಿಕ್ ಪಾಂಡ್ಯ, ರಮನ್‌ದೀಪ್ ಸಿಂಗ್, ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್ ಪಡೆದರು.
023 ರಲ್ಲಿ ಆಫ್ರಿಕಾ ವಿರುದ್ಧ ಭಾರತ ಜೋಹಾನ್ಸ್‌ಬರ್ಗ್‌ನಲ್ಲಿ 106 ರನ್‌ಗಳ ಜಯವನ್ನು ಸಾಧಿಸಿತ್ತು. ಇಲ್ಲಿಯವರೆಗೆ ಇದು ಆಫ್ರಿಕಾ ವಿರುದ್ಧ ದೊಡ್ಡ ಅಂತರದ ಗೆಲುವು ಆಗಿತ್ತು. ಈಗ ಈ ದಾಖಲೆಯನ್ನು ಭಾರತ ಮುರಿದ್ದಿದ್ದು ಮೂರನೇ ದೊಡ್ಡ ಅಂತರದ ಗೆಲುವು ಇದಾಗಿದೆ.