ಪುತ್ತೂರು : ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ನಡೆದ ಸರಣಿ ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಘಟನೆ ನಡೆದಿದ್ದು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದು ಗಾಯಾಳುಗಳಿಗೆ ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ರವಾನಿಸಿದು ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


