Friday, March 6, 2026
Flats for sale
Homeರಾಜಕೀಯಬೆಂಗಳೂರು : ಉಪಚುನಾವಣೆ : 3 ಕ್ಷೇತ್ರದಲ್ಲಿ ಕಾಂಗೆಸ್ಸ್ ಭರ್ಜರಿ ಗೆಲುವು,ಬಿಜೆಪಿ ,ಜೆಡಿಎಸ್ ಗೆ ತೀವ್ರ...

ಬೆಂಗಳೂರು : ಉಪಚುನಾವಣೆ : 3 ಕ್ಷೇತ್ರದಲ್ಲಿ ಕಾಂಗೆಸ್ಸ್ ಭರ್ಜರಿ ಗೆಲುವು,ಬಿಜೆಪಿ ,ಜೆಡಿಎಸ್ ಗೆ ತೀವ್ರ ಮುಖಭಂಗ …!

ಬೆಂಗಳೂರು : ರಾಜ್ಯದಲ್ಲಿ ನಡೆದ ಮೂರೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವುಸಾದಿಸಿದೆ. ರಾಷ್ಟ್ರದ ಗಮನ ಸೆಳೆದಿದ್ದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೈ ಅಭ್ಯರ್ಥಿಗಳು ಗೆಲ್ಲುವ ಮೂಲಕ ಎನ್‌ಡಿಎಗೆ ತೀವ್ರ ಆಘಾತ ನೀಡಿದ್ದಾರೆ. ಉಪಚುನಾವಣೆಯಲ್ಲಿ ಭಾರೀ ಸದ್ದುಗದ್ದಲ ಮಾಡಿದ್ದ ಮುಡಾ, ವಾಲೀಕಿ, ವಕ್‌್ಫ ಹಾಗೂ ಸಚಿವ ಜಮೀರ್‌ ಅವರ ವಿವಾದಾತಕ ಹೇಳಿಕೆಗಳು ಮತದಾರನ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ ಎಂದು ಫಲಿತಾಂಶದಿಂದಲೇ ಸ್ಪಷ್ಟವಾಗಿದೆ.

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್​ರನ್ನ ಹಿಂದಿಕ್ಕಿ ಕಾಂಗ್ರೆಸ್​ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರು ಗೆಲುವು ಸಾಧಿಸಿದ್ದಾರೆ. 25,515 ಮತಗಳ ಅಂತರದಿಂದ ಸಿ.ಪಿ ಯೋಗೇಶ್ವರ್ ಅವರು ವಿಜಯ ದಾಖಲಿಸಿದ್ದಾರೆ.ಇದೇ ಮೊದಲ ಭಾರಿಗೆ (1999 ರಿಂದ ಈ ವರೆಗೂ ) ಒಂದು ಲಕ್ಷಕ್ಕೂ ಹೆಚ್ಚಿನ ಮತಗಳನ್ನು ಪಡೆದುಕೊಂಡಿದ್ದಾರೆ. ಈ ವರೆಗೂ 9 ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಸಿ.ಪಿ. ಯೋಗೇಶ್ವರ್ ಅವರಿಗೆ ಇದು ಆರನೇ ಗೆಲುವು. ಚನ್ನಪಟ್ಟಣದಲ್ಲಿ ನಡೆದ 2009 ಹಾಗೂ 2011 ರ ವಿಧಾನಸಭಾ ಉಪಚುನಾವಣೆಗಳಲ್ಲಿ 2009 ರಲ್ಲಿ ಸೋಲು ಕಂಡಿದ್ದ ಅವರು 2011 ರಲ್ಲಿ ಗೆಲುವು ದಾಖಲಿಸಿದ್ದರು. 20 ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 1,12,388 ಮತ ಪಡಿದಿದ್ದಾರೆ. ಎನ್ ಡಿಎ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 87,031 ಮತ ದಾಖಲಿಸಿದ್ದಾರೆ.ಒಟ್ಟು 25,357 ಮುನ್ನಡೆಯಲ್ಲಿ ಸಿ.ಪಿ. ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ.

ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಸೋಲೊಪ್ಪಿಕೊಂಡಿದ್ದಾರೆ. ಸಂಡೂರು ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದಾರೆ. ಪತಿಯಿಂದ ತೆರವಾಗಿ ಸ್ಥಾನದಲ್ಲಿ ಪತ್ನಿ ಗೆದ್ದಿದ್ದಾರೆ.

ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ.ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಯಾಸೀರ್​ ಪಠಾಣ್​ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಅವರಿಗೆ 1,00,587 ಮತಗಳು ದೊರೆತಿದ್ದರೆ, ಶಿಗ್ಗಾಂವಿ ಬಿಜೆಪಿ​ ಅಭ್ಯರ್ಥಿ ಭರತ್​ ಬೊಮ್ಮಾಯಿಗೆ 86,960 ಮತಗಳು ದೊರೆತಿವೆ.

ಅಜ್ಜಂಪೀರ್​ ಖಾದ್ರಿ ಬಂಡಾಯ ಶಮನ ಆಗಿದ್ದು ಪಠಾಣ್​​ಗೆ ಪ್ಲಸ್ ಆಯಿತು. ಇಷ್ಟೇ ಅಲ್ಲ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿನ ರಣತಂತ್ರ ಹೆಣೆದಿದ್ದು, ವಾಲ್ಮೀಕಿ, ದಲಿತ ಮತದಾರರು ‘ಕೈ’ ಹಿಡಿದ ಲೆಕ್ಕಾಚಾರ ನಾಯಕರಿಗೆ ಇದೆ. ಸಚಿವ ಜಮೀರ್ ಮುಸ್ಲಿಂ ಮತದಾರರ ಓಲೈಕೆ ಮಾಡಿದ್ದು, ಪಠಾಣ್​ ಪರ ಅಜ್ಜಂಪೀರ್ ಖಾದ್ರಿ ಪ್ರಚಾರ ಮಾಡಿದ್ದು, ಸಿಎಂ ಮುಡಾ ಸಂಕಷ್ಟದ ಅನುಕಂಪ ವರ್ಕೌಟ್ ಆಗಿದ್ದಲ್ಲದೇ, ಕುರುಬ ಸಮಾಜದ ಮತ ಕಾಂಗ್ರೆಸ್​ಗೆ ವಾಲಿದ ನಂಬಿಕೆ ಆ ಪಕ್ಷದ ನಾಯಕರಲ್ಲಿದೆ.

ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವಿಯಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿದೆ. ಈ ಮೂಲಕ ರಾಜ್ಯದಲ್ಲಿ ಉಪ ಚುನಾವಣೆ ಇದ್ದ ಮೂರಕ್ಕೆ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್​ ಭರ್ಜರಿ ಗೆಲುವು ಸಾಧಿಸಿದೆ. ಇದರಿಂದ ಜೆಡಿಎಸ್ ಹಾಗೂ ಬಿಜೆಪಿಗೆ ಭಾರೀ ನಿರಾಸೆ ಆಗಿದೆ. ಸಂಡೂರಲ್ಲಿ ಅನ್ನಪೂರ್ಣ ಅವರು ಗೆಲುವು ಸಾಧಿಸಿದರೆ,ಶಿಗ್ಗಾಂವಿಯಲ್ಲಿ ಯಾಸಿರ್ ಪಠಾಣ್ ಅವರು ವಿಜಯಿ ಆಗಿದ್ದಾರೆ.ಇಷ್ಟೇ ಅಲ್ಲದೇ ಕಾಂಗ್ರೆಸ್​ಗೆ ಗೆಲುವು ಖಚಿತವಾಗುತ್ತಿದ್ದಂತೆ ಕಾರ್ಯಕರ್ತರೆಲ್ಲ ಮುಂದಿನ ಸಿಎಂ ಡಿ.ಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ್ದಾರೆ. ಡಿ.ಕೆ ಶಿವಕುಮಾರ್ ಪರವಾಗಿ ಕಾರ್ಯಕರ್ತರ ಜೈಕಾರ ಮೊಳಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular