ಲಕ್ನೋ : ಗೂಗಲ್ ಮ್ಯಾಪ್ ನ್ನು ನಂಬಿಕೊಂಡು ಹೋಗುತ್ತಿದ್ದ ಮೂವರು ಸೇತುವೆಯಿಂದ ನದಿಗೆ ಬಿದ್ದು ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಫರೀದ್ಪುರದಲ್ಲಿ ನಡೆದಿದೆ.
ಮೃತರನ್ನು ಮೃತರನ್ನು ಫರೂಕಾಬಾದ್ನ ವಿವೇಕ್ ಕುಮಾರ್ ಮತ್ತು ಅಮಿತ್ ಎಂದು ಗುರುತಿಸಲಾಗಿದೆ. ಇನ್ನೊಬ್ಬನ ಗುರುತು ಪತ್ತೆಯಾಗಿಲ್ಲ. ಆತನ ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದ ಮೂವರು ಗೂಗಲ್ ಮ್ಯಾಪ್ ಬಳಸಿಕೊಂಡು ತೆರಳುತ್ತಿದ್ದರೆಂದು ತಿಳಿದುಬಂದಿದೆ.ಇಬ್ಬರು ಸಹೋದರರು ಹಾಗೂ ಮತ್ತೋರ್ವ ಬರೇಲಿಯಿಂದ ಬದೌನ್ ಜಿಲ್ಲೆಯ ದತಗಂಜ್ಗೆ ತೆರಳುತ್ತಿದ್ದರು. ಈ ವೇಳೆ ಫರೀದ್ಪುರದಲ್ಲಿ ರಾಮಗಂಗಾ ನದಿಯ ಮೇಲೆ ನಿರ್ಮಾಣ ಹಂತದ ಸೇತುವೆಯಿಂದ 50 ಅಡಿ ಕೆಳಗೆ ಬಿದ್ದಿದೆ. ಇದನ್ನು ಗಮನಿಸಿದ ಗ್ರಾಮಸ್ಥರು ಕಾರನ್ನು ನದಿಯಿಂದ ಹೊರತೆಗೆದಿದ್ದಾರೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


