Tuesday, July 1, 2025
Flats for sale
Homeರಾಜ್ಯಬೆಂಗಳೂರು : HSRP ನಂಬರ್ ಪ್ಲೇಟ್ ಅಳವಡಿಕೆಯ ಗಡುವು ಮತ್ತೆ ಡಿಸೆಂಬರ್ 31ರ ವರೆಗೆ ವಿಸ್ತರಣೆ.

ಬೆಂಗಳೂರು : HSRP ನಂಬರ್ ಪ್ಲೇಟ್ ಅಳವಡಿಕೆಯ ಗಡುವು ಮತ್ತೆ ಡಿಸೆಂಬರ್ 31ರ ವರೆಗೆ ವಿಸ್ತರಣೆ.

ಬೆಂಗಳೂರು : ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸಿಕೊಳ್ಳಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ.

ಕರ್ನಾಟಕದಲ್ಲಿರುವ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳು, ಕೇವಲ 55 ಲಕ್ಷ ವಾಹನಗಳು ಮಾತ್ರ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿವೆ. ಹೀಗಾಗಿ 01-04-2019 ರ ಹಿಂದಿನ ಎಲ್ಲಾ ವಾಹನಗಳು ಡಿಸೆಂಬರ್ 31ರೊಳಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ಸೂಚಿಸಿದೆ. ಈ ಮೂಲಕ ಐದನೇ ಬಾರಿಗೆ ಗಡವು ವಿಸ್ತರಿಸಿದೆ.

ಡಿಸೆಂಬರ್ ನಂತರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನಗಳಿಗೆ ದಂಡ ವಿಧಿಸಲಾಗುವುದು ಎಂದೂ ಹೇಳಲಾಗಿತ್ತು ಆದರೆ ಇದೀಗ ಅವಧಿ ವಿಸ್ತರಿಸಿರುವುದರಿಂದ ವಾಹನ ಸವಾರರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅನ್ನು ಕಡ್ಡಾಯಾವಾಗಿ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular