ತುಮಕೂರು : ಬಿಗ್ ಬಾಸ್ ಸ್ಪರ್ದಿ ಡ್ರೋನ್ ಪ್ರತಾಪ್ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿರುತ್ತಾರೆ. ಕೃಷಿ ಹೊಂಡದಲ್ಲಿ ಸೋಡಿಯಂ ಹಾಕಿ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ನನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ.
ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು.ಈ ವಿಡಿಯೋ ಸಾರ್ವಜನಿಕರ ಟೀಕೆಗೆ ಗುರಿಯಾಗಿತ್ತು.ನಿರ್ಜನ ಪ್ರದರ್ಶನದಲ್ಲಿದ್ದ ಕೃಷಿ ಹೊಂಡದಂತ ಆಳವಾದ ಗುಂಡಿಯಲ್ಲಿನ ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದರು. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ, ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್ ಬಿಲ್ಡಪ್ ಬೇರೆ ಕೊಟ್ಟಿದ್ದರು. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಎಂದು ಪ್ರತಾಪ್ ಕೂಗಿದ್ದರು. ಈ ವಿಡಿಯೋ ವೈರಲ್ ಆಗಿದ್ದು ಕೆಂಗಣ್ಣಿಗೆ ಗುರಿಯಾಗಿದ್ದರು.ಇದೀಗ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಡ್ರೋನ್ ಪ್ರತಾಪ್ನನ್ನು ಅರೆಸ್ಟ್ ಮಾಡಿ ಬೆಂಗಳೂರಿಗೆ ಕೊಂಡುಹೋಗಿದ್ದಾರೆ.
ಈ ರೀತಿ ವಿಡಿಯೋ ಮಾಡೋದು ಕಾನೂನು ಬಾಹಿರ. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ. ಯಾವೆಲ್ಲ ಕೆಮಿಕಲ್ ಹಾಕಿದ್ರೇ ಬ್ಲಾಸ್ಟ್ ಆಗುತ್ತೆ ಅಂತಾನೂ ಲೈವ್ನಲ್ಲಿ ಹೇಳಿದ್ದು, ಇದನ್ನು ಕಿಡಿಗೇಡಿಗಳು ಕುಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಅಂತಾ ಪರಿಸತವಾದಿ ವಿಜಯ್ ನಿಶಾಂತ್ ಕಿಡಿಕಾರಿದ್ದಾರೆ.ಈ ಸಂಬಂಧಮಿಡಿಗೇಶಿ ಪೊಲೀಸರು BNS ಸೆಕ್ಷನ್ 288, ಸ್ಫೋಟವಸ್ತು ನಿಯಂತ್ರಣ ಕಾಯ್ದೆ 3ರಅಡಿ ಪ್ರಕರಣ ದಾಖಲಿಸಿಕೊಂಡು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದಾರೆ.