ಬೆಂಗಳೂರು : ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸಿಕೊಳ್ಳಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ.
ರಾಜ್ಯದಲ್ಲಿ ಎಷ್ಟು ಜನಸಂಖ್ಯೆ ಇದೆಯೋ ಸುಮಾರು ಅಷ್ಟೇ ವಾಹನಗಳನ್ನು ಕೂಡ ಜನ ಖರೀದಿ ಮಾಡಿದ್ದಾರೆ. ಒಂದೊಂದು ಮನೆಯಲ್ಲೂ ಕೂಡ ಮೂರ್ನಾಲ್ಕಕ್ಕಿಂತ ಹೆಚ್ಚು ವಾಹನಗಳಿವೆ. ಇತ್ತೀಚೆಗಂತೂ ಎಲ್ಲವೂ ಡಿಜಿಟಲ್ ಯುಗ ಆಗಿ ಹೋಗಿದೆ. ಇದಕ್ಕೆ ಪೂರಕವಾಗುವಂತೆ ಈಗಾಗಲೇ ಸಾರಿಗೆ ಇಲಾಖೆ 2019 ರ ಮಾರ್ಚ್ – 31 ರ ಹಿಂದಿನ ಹಳೆಯ ಎರಡು ಕೋಟಿಗೂ ಹೆಚ್ಚಿನ ವಾಹನಗಳಿಗೆ ಹೈಟೆಕ್ ಟಚ್ ಕೊಡಲು ಸಿದ್ಧವಾಗಿತ್ತು. ಆದರೆ ಯಾಕೋ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಮಾತ್ರ ಸಿದ್ಧವಿಲ್ಲ. ಈಗಾಗಲೇ ಸಾರಿಗೆ ಇಲಾಖೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಐದು ಬಾರಿ ಗಡುವು ವಿಸ್ತರಣೆ ಮಾಡಿದೆ. ಈ ಬಾರಿ ಕೊನೆಯದಾಗಿ ಡಿಸೆಂಬರ್ 31 ರವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು ಕೊಟ್ಟಿದೆ. ಗಡುವು ಮುಗಿದ ಕೂಡಲೇ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿತ್ತು. ಆದರೆ, ಇದಕ್ಕೆ ಸದ್ಯ ಹೈಕೋರ್ಟ್ ರಿಲೀಫ್ ನೀಡಿದೆ.
ಕಳೆದ ಒಂದೂವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಹೆಚ್ಎಸ್ಆರ್ಪಿ ಆಳವಡಿಕೆ ಮಾಡಲಾಗಿದೆ. ಇನ್ನೂ 1.44 ಕೋಟಿ ಹಳೆಯ ವಾಹನಗಳು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಬೇಕಿದೆ. ಇನ್ನು ಹೆಚ್ಚಿನ ವಾಹನ ಮಾಲೀಕರು ಹೆಚ್ಎಸ್ಆರ್ಪಿ ಆಳವಡಿಕೆಗೆ ನಿರಾಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಸಾರಿಗೆ ಇಲಾಖೆಯು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸಲು ಶಿಬಿರಗಳನ್ನು ಆಯೋಜನೆ ಮಾಡಲು ತೀರ್ಮಾನ ಮಾಡಿದೆ.
ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಕಡ್ಡಾಯಾವಾಗಿ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಡಿಸೆಂಬರ್ ನಂತರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನಗಳಿಗೆ ದಂಡ ವಿಧಿಸಲಾಗುವುದು ಎಂದೂ ಹೇಳಲಾಗಿತ್ತು ಆದರೆ ಇದೀಗ ಅವಧಿ ವಿಸ್ತರಿಸಿರುವುದರಿಂದ ವಾಹನ ಸವಾರರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಮುಂದಿನ ಆದೇಶದ ವರೆಗೂ ವಾಹನ ಮಾಲೀಕರ ಮೇಲೆ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.