Thursday, March 12, 2026
Flats for sale
Homeಜಿಲ್ಲೆಹಾಸನ ; ಬೆಂಗಳೂರಿನಿಂದ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ದಿಡೀರ್ ಬೆಂಕಿ,ಮೂವತ್ತು ಪ್ರಯಾಣಿಕರು ಪ್ರಾಣಪಾಯದಿಂದ ಪಾರು…!

ಹಾಸನ ; ಬೆಂಗಳೂರಿನಿಂದ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ದಿಡೀರ್ ಬೆಂಕಿ,ಮೂವತ್ತು ಪ್ರಯಾಣಿಕರು ಪ್ರಾಣಪಾಯದಿಂದ ಪಾರು…!

ಹಾಸನ : ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ ಕಾಣಿಸಿಕೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದೆ.

ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಈ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಶಿರಾಡಿಘಾಟ್ ರಸ್ತೆಯ, ಎತ್ತಿನಹಳ್ಳ ಬಳಿ ಇಂದು ಮುಂಜಾನೆ ನಡೆದಿದೆ.

ಬೆಂಗಳೂರಿನಿಂದ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೆ ಶ್ರೀ ಹೆಸರಿನ ಸ್ಲೀಪಿಂಗ್ ಕೋಚ್ ಎಸಿ ಬಸ್ ಇದಾಗಿದ್ದು ಸುಮಾರು ಮೂವತ್ತು ಪ್ರಯಾಣಿಕರು ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ.

ಇಂದು ಮುಂಜಾನೆ ಶಿರಾಡಿಘಾಟ್ ರಸ್ತೆಯಲ್ಲಿ ತೆರಳುವಾಗ ಈ ಘಟನೆ ನಡೆದಿದ್ದು ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಚಾಲಕ ಯೋಗೀಶ್ ಕೆಳಗಿಸಿದ್ದಾರೆಂದು ತಿಳಿದುಬಂದಿದೆ. ನಂತರ ಇಡೀ ಬಸ್‌ಗೆ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಮಾಡಿದ್ದಾರೆ.

AR-20 9090 ನಂಬರ್‌ನ ಖಾಸಗಿ ಬಸ್ ಇದಾಗಿದ್ದು ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular