ಬೆಂಗಳೂರು : 2025 ರ ಹೊಸ ವರ್ಷದ ಬರಮಾಡಿಕೊಳ್ಳಲು ರಾಜ್ಯದಲ್ಲಿ ಡಿ.31ರ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದಲ್ಲಿ ಬರೋಬ್ಬರಿ 308 ಕೋಟಿ ರೂ ಮೌಲ್ಯದ ಮದ್ಯ ಮಾರಾಟವಾಗಿದೆ.
ಅಬಕಾರಿ ಇಲಾಖೆಯು 250 ಕೋಟಿ ರೂ. ಮೌಲ್ಯದ ಮದ್ಯ ಮಾರಾಟದ ಗುರಿ ಹೊಂದಿತ್ತು. ಆದರೆ, ನಿರೀಕ್ಷೆಗೂ ಮೀರಿ ಮದ್ಯ ಮಾರಾಟವಾಗಿರುವುದಕ್ಕೆ ಅಧಿಕಾರಿಗಳು ಅಚ್ಚರಿಗೊಂಡಿದ್ದಾರೆ. ಕಳೆದ ವರ್ಷ 2023 ರ ಡಿಸೆಂಬರ್ 31೧ ರಂದು 193 ಕೋಟಿ ರೂಪಾಯಿ ಮದ್ಯ ಮಾರಾಟವಾಗಿತ್ತು. ಆದರೆ, 2024 ಡಿಸೆಂಬರ್ 31 ರಂದು 7,305 ಮದ್ಯ ಮಾರಾಟಗಾರರು ಕೆಎಸ್‌ಬಿಸಿಎಲ್‌ನಿಂದ ಮದ್ಯ ಖರೀದಿ ಮಾಡಿದ್ದಾರೆ. ಐಎಂಎಲ್ 4,83,715 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ 250.25 ಕೋಟಿ ಆದಾಯ ಸಂಗ್ರಹವಾಗಿದೆ.
ಬಿಯರ್ ದಾಖಲೆ ಮಟ್ಟದಲ್ಲಿ ಮಾರಾಟವಾಗಿದ್ದು ಸುಮಾರು 92,339 ಲಕ್ಷ ಬಾಕ್ಸ್ ಮಾರಾಟದಿಂದ 57.75
ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಒಟ್ಟು 7,76,೦42 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ ಒಟ್ಟು 308 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ.
ಹೊಸವರ್ಷ ಆರಂಭಕ್ಕೂ ಮುನ್ನ ಸಾಲು ಸಾಲು ರಜೆ ಇದ್ದ ಹಿನ್ನೆಲೆಯಲ್ಲಿ ಡಿ.27 ರಂದು 408.58 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿತ್ತು. ಐಎಂಎಲ್ 6,22,೦62 ಲಕ್ಷ ಬಾಕ್ಸ್ ಮಾರಾಟದಿಂದ 327,50 ಕೋಟಿ ಸಂಗ್ರಹವಾ ಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದರು