Friday, March 13, 2026
Flats for sale
Homeದೇಶನವದೆಹಲಿ : ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ರಸ್ತೆ ಅಪಘಾತ ಸಂತ್ರಸ್ತರಿಗೆ ಹೊಸ ಯೋಜನೆ, 1.5 ಲಕ್ಷ...

ನವದೆಹಲಿ : ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ರಸ್ತೆ ಅಪಘಾತ ಸಂತ್ರಸ್ತರಿಗೆ ಹೊಸ ಯೋಜನೆ, 1.5 ಲಕ್ಷ ರೂ. ನಗದು ರಹಿತ ಚಿಕಿತ್ಸೆ ಘೋಷಣೆ ..!

ನವದೆಹಲಿ : ರಸ್ತೆ ಅಪಘಾತದ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊಸ ಯೋಜನೆಯೊಂದನ್ನು ದೇಶದಲ್ಲಿ ಜಾರಿಗೆ ತರಲು ಹೊರಟಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಘೋಷಿಸಿದ್ದಾರೆ.

ಇದರ ಅಡಿಯಲ್ಲಿ ಅಪಘಾತಕ್ಕೀಡಾದವರ ಏಳು ದಿನಗಳ ಚಿಕಿತ್ಸೆಗಾಗಿ 1.5 ಲಕ್ಷ ರೂಪಾಯಿ ವೆಚ್ಚವನ್ನು ಸರ್ಕಾರ ಭರಿಸಲಿದೆ. ಅಪಘಾತ ಸಂಭವಿಸಿದ 24 ಗಂಟೆಯೊಳಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು
ಕೇಂದ್ರ ಸಚಿವರು ತಿಳಿಸಿದ್ದಾರೆ.

ಇದರೊಂದಿಗೆ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಬಲಿಯಾದವರ ಕುಟುಂಬಗಳಿಗೆ 2 ಲಕ್ಷ ರೂ. ವರೆಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಭಾರತ್ ಮಂಟಪದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಾರಿಗೆ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಇದರಲ್ಲಿ ಸಾರಿಗೆ ಸಂಬAಧಿತ ನೀತಿಗಳು ಮತ್ತು ಕೇಂದ್ರ ಮತ್ತು ರಾಜ್ಯದ ನಡುವಿನ ಸಹಕಾರದ ಕುರಿತು ಚರ್ಚಿಸಲಾಗಿದೆ. ಸಭೆಯ ಬಳಿಕ ಮಾತನಾಡಿದ ಕೇಂದ್ರ ಸಚಿವರು, ನಗದು ರಹಿತ ಚಿಕಿತ್ಸಾ ಯೋಜನೆ ಆರಂಭಿಸಿದ್ದೇವೆ. ಇದರ ಅಡಿಯಲ್ಲಿ ಅಪಘಾತವಾದ 24 ಗಂಟೆಗಳ ಒಳಗೆ ಪೊಲೀಸರಿಗೆ ಮಾಹಿತಿ ನೀಡಿದರೆ, ನಾವು ದಾಖಲಾಗುವ ರೋಗಿಯ ಏಳು ದಿನಗಳವರೆಗೆ ಚಿಕಿತ್ಸಾ ವೆಚ್ಚವನ್ನು ಮತ್ತು ಚಿಕಿತ್ಸೆಗಾಗಿ
ಗರಿಷ್ಠ 1.5 ಲಕ್ಷ ರೂ. ಇದರೊಂದಿಗೆ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ. ಪರಿಹಾರ ದೊರೆಯಲಿದೆ ಎಂದಿದ್ದಾರೆ.

ರಸ್ತೆ ಸುರಕ್ಷತೆಯು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಕೇAದ್ರ ಸಚಿವರು ಹೇಳಿದ್ದಾರೆ. 2024 ರಲ್ಲಿ ಸರಿಸುಮಾರು 1.50 ಲಕ್ಷ ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪೈಕಿ 30ಸಾವಿರ ಮಂದಿ ಹೆಲ್ಮೆಟ್ ಧರಿಸದೇ ಸಾವನ್ನಪ್ಪಿದ್ದಾರೆ. ಇದರಲ್ಲಿ ಶೇ.66 ರಷ್ಟು ಜನರು 18 ರಿಂದ 34 ವರ್ಷ ವಯಸ್ಸಿನವರು, ಇದಲ್ಲದೇ ಶಾಲಾ-ಕಾಲೇಜು, ಶಿಕ್ಷಣ ಸಂಸ್ಥೆಗಳ ಸಮೀಪ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ವ್ಯವಸ್ಥೆ ಇಲ್ಲದ ಕಾರಣ ಅಪಘಾತದಲ್ಲಿ 1೦ ಸಾವಿರ ಮಕ್ಕಳು ಸಾವನ್ನಪ್ಪಿದ್ದಾರೆ. ಶಾಲೆಗಳ ಆಟೋ
ರಿಕ್ಷಾ ಹಾಗೂ ಮಿನಿ ಬಸ್‌ಗಳಿಗೆ ನಿಯಮ ರೂಪಿಸಲಾಗಿದೆ ಎನ್ನುವ ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular