ಆಂಧ್ರ ಪ್ರದೇಶ : ವೈಕುಂಠ ದ್ವಾರ ದರ್ಶನದ ಟಿಕೆಟ್ ತೆಗೆದುಕೊಳ್ಳುವ ವೇಳೆ ನೂಕುನುಗ್ಗಲು ಉಂಟಾಗಿದ್ದ ಹಿನ್ನೆಲೆ ಅಪಾರ ಪ್ರಮಾಣದ ಸಾವು ನೋವು ಉಂಟಾದ ಘಟನೆ ತಿರುಪತಿಯಲ್ಲಿ ನಡೆದಿದೆ. ಟಿಕೆಟ್ ಪಡೆದುಕೊಳ್ಳುವ ನಿಟ್ಟಿನಲ್ಲಿ ಏಕಕಾಲಕ್ಕೆ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಮೊದಲು ಒಬ್ಬ ಮಹಿಳೆ ಸಾವನಪ್ಪಿದ್ದು ಬಳಿಕ 6 ಮಂದಿವ ಸಾವನಪ್ಪಿದ ವರದಿ ತಿಳಿದುಬಂದಿದೆ.ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ದೇವಾಲಯದಲ್ಲಿ ವೈಕುಂಠ ಏಕಾದಶಿ ದರ್ಶನದ ವಿಶೇಷ ಟಿಕೆಟ್ ಪಡೆಯುವ ವೇಳೆ ಈ ದುರಂತ ಸಂಭವಿಸಿದೆ.
ಬುಧವಾರ ರಾತ್ರಿ ತಿರುಪತಿ ತಿರುಮಲ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ದರ್ಶನದ ಟಿಕೆಟ್ ಪಡೆಯುವ ಸಂದರ್ಭದ ನೂಕು ನುಗ್ಗಲು ಉಂಟಾಗಿದೆ. ಈ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಸೇರಿ ಐವರು ಭಕ್ತರು ಮೃತಪಟ್ಟಿದ್ದಾರೆ.ಈ ವೇಳೆ ಸಾವಿರಾರು ಮಂದಿ ಏಕಕಾಲಕ್ಕೆ ಕೌಂಟರ್ ಬಳಿ ನುಗ್ಗಿದಾಗ ಕಾಲ್ತುಳಿತ ಸಂಭವಿಸಿದೆ. ಇದರ ವಿಡಿಯೋಗಳು ಕೂಡ ಭಯಾನಕವಾಗಿದ್ದು, ನೆಲದಲ್ಲಿ ಬಿದ್ದ ವ್ಯಕ್ತಿಗಳನ್ನು ಬದುಕಿಸಲು ಪೊಲೀಸರು ಸಿಪಿಆರ್ ನಡೆಸುತ್ತಿರುವ ವಿಡಿಯೋಗಳು ಕೂಡ ದಾಖಲಾಗಿವೆ.ಅಂದಾಜು 25 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಎಲ್ಲರನ್ನೂ ಸ್ಥಳೀಯ ರುಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
10, 11, 12ರ ವೈಕುಂಠ ದ್ವಾರ ದರ್ಶನದ ಹಿನ್ನೆಲೆ ಟಿಕೆಟ್‌ಗಳನ್ನು ಮಾರಾಟಮಾಡಲು ಟಿ.ಡಿಟಿ ನಿರ್ಧರಿಸಿದ್ದು ಒಟ್ಟಾರೆ 1 ಲಕ್ಷ 20 ಸಾವಿರ ಸೇವಾ ದರ್ಶನ ಟಿಕೆಟ್‌ಗಳು ಇರುವುದಾಗಿ ಮಾಹಿತಿ ನೀಡಿತ್ತು.ಗುರುವಾರ ಮುಂಜಾನೆ 5 ಗಂಟೆಯಿಂದ ಟಿಕೆಟ್ ವಿತರಣೆ ಮಾಡಲಾಗುವುದು ಎಂದು ಟಿಟಿಡಿ ತಿಳಿಸಿದ್ದು ಪ್ರತಿದಿನಕ್ಕೆ 40 ಸಾವಿರ ಟಿಕೆಟ್‌ನಂತೆ ನೀಡುವುದಾಗಿ ಟಿಟಿಡಿ ನಿರ್ಧಾರ ಮಾಡಿತ್ತು.ಅದರಂತೆಯೇ ವಿಷ್ಣು ನಿವಾಸಂ ಕೌಂಟರ್‌ನ 9 ಕೇಂದ್ರದ 94 ಕೌಂಟರ್‌ಗಳಲ್ಲಿ ಟಿಕೆಟ್ ಮಾರಾಟ ಮಾಡಲು ಟಿಟಿಡಿ ತೀರ್ಮಾನಿಸಿತ್ತು ಟಿಕೆಟ್ ಮಾರಾಟ ಪ್ರಕ್ರಿಯೆ ಆರಂಭವಾಗಲು ಇನ್ನೂ ಸಮಯವಿದ್ದ ಕಾರಣ ಪೊಲೀಸರು ಕೂಡ ಎಚ್ಚರಿಕೆಯಿಂದ ಕ್ಯೂ ಮೇಂಟೇನ್ ಮಾಡಲು ಕಾರ್ಯನಿರ್ವಹಿಸಿದ್ದರು ಆದರೆ ಜನ ಮರುಳೋ ಜಾತ್ರೆ ಮರುಳೋ ತರಹ ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಸಂಭವಿಸಿದೆ. ತಮಿಳುನಾಡಿನ ಸೇಲಂ ಮೂಲದ ಮಹಿಳೆ ಸೇರಿದಂತೆ ನಾಲ್ವರು ಭಕ್ತರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ಭಕ್ತರ ಗುರುತುಗಳು ಇನ್ನೂ ಸಹ ಪತ್ತೆಯಾಗಿಲ್ಲ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


