Monday, July 14, 2025
Flats for sale
Homeಜಿಲ್ಲೆಮಂಗಳೂರು : ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ : ಸ್ಥಳ ಮಹಜರು ವೇಳೆ ತಪ್ಪಿಸಲೆತ್ನಿಸಿದ...

ಮಂಗಳೂರು : ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ : ಸ್ಥಳ ಮಹಜರು ವೇಳೆ ತಪ್ಪಿಸಲೆತ್ನಿಸಿದ ಆರೋಪಿಗೆ ಗುಂಡೇಟು,ಆಸ್ಪತ್ರೆಗೆ ದಾಖಲು..!

ಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ತಮಿಳುನಾಡು ಸಮೀಪದ ಪದ್ಮನೇರಿ ಗ್ರಾಮದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು ಆದರೆ ಇಂದು ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ತಲಪಾಡಿಯ ಅಲಂಕಾರು ಗುಡ್ಡದ ಬಳಿ ಕರೆದುಕೊಂಡು ಹೋಗಿದ್ದರು. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಯತ್ನ ಹಿನ್ನೆಲೆ ಆರೋಪಿ ಕಣ್ಣನ್​ಮಣಿ ಕಾಲಿಗೆ ಫೈರಿಂಗ್​ ಮಾಡಲಾಗಿದೆ. ಮುರುಗನ್ ಡಿ. ದೇವರ್, ಯೋಶುವಾ ರಾಜೇಂದ್ರನ್, ಕಣ್ಣನ್ ಮಣಿಯನ್ನ ನಿನ್ನೆ ತಮಿಳುನಾಡಿನ ತಿರುವನ್ವೇಲಿಯಲ್ಲಿ ಬಂಧಿಸಿದ್ದ ಪೊಲೀರು ಇಂದು ರಾಜ್ಯಕ್ಕೆ ಕರೆದುಕೊಂಡು ಬರುತ್ತಿದ್ದರು. ಆದರೆ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿ ಅಲಂಕಾರು ಗುಡ್ಡ ಬಳಿ ಆರೋಪಿ ಕಣ್ಣನ್‌ಮಣಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ವೇಳೆ ಇನ್ಸ್‌ಪೆಕ್ಟರ್‌ ರಫೀಕ್‌, ಆರೋಪಿ ಮೇಲೆ ಫೈರಿಂಗ್‌ ಮಾಡಿದ್ದಾರೆ. ಸದ್ಯ ಆತನನ್ನ ದೇರಳಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಟೆಕಾರು ಬ್ಯಾಂಕ್‌ ಲೂಟಿ ಮಾಡಿದವರು ತಮಿಳುನಾಡಿನವರೇ ಆದರೂ, ಇವರೆಲ್ಲಾ ಮುಂಬೈನ ನಟೋರಿಯಸ್‌ ಧಾರಾವಿ ಗ್ಯಾಂಗ್‌ನವರು. ಕೋಟೆಕಾರ್ ಬ್ಯಾಂಕ್ ದರೋಡೆಯ ಕಿಂಗ್ ಪಿನ್ ಮುರುಗನ್ ದರೋಡೆಯ ಕಂಪ್ಲೀಟ್ ಪ್ಲ್ಯಾನ್ ಸಿದ್ಧಪಡಿಸಿದ್ದೇ ಮುರುಗನ್ಧಾರಾವಿಯಲ್ಲಿ ಎಂಬ ಮಾಹಿತಿ ದೊರೆತಿದೆ.

ತಪಾಸಣೆ ವೇಳೆ ಆರೋಪಿ ಕಣ್ಣನ್ ಮಣಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಸ್ಥಳದಲ್ಲಿ ಸಿಕ್ಕ ಒಡೆದ ಬಿಯರ್ ಬಾಟಲಿ ಬಳಸಿ ಬೆಂಗಾವಲು ಸಿಬ್ಬಂದಿ ಅಂಜನಪ್ಪ ಮತ್ತು ನಿತಿನ್ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳು ತನಿಖಾಧಿಕಾರಿ ಉಳ್ಳಾಲ ಪೊಲೀಸ್ ನಿರೀಕ್ಷಕರನ್ನು ತಳ್ಳಿ ಚಾಕುವಿನಿಂದ ಇರಲು ಯತ್ನಿಸಿದ್ದಾರೆ. ಜೊತೆಗಿದ್ದ ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಆರೋಪಿಗಳು ಹಲ್ಲೆ ಮುಂದುವರಿಸಿ ಪರಾರಿಯಾಗಲು ಯತ್ನಿಸಿದ್ದಾರೆ.

ಪ್ರತಿಯಾಗಿ, ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಆರೋಪಿಯ ಕಾಲಿಗೆ ಗುಂಡು ಹಾರಿಸಿ, ಆತನನ್ನು ಬಗ್ಗುಬಡಿದು ಕಸ್ಟಡಿಗೆ ತೆಗೆದುಕೊಂಡರು. ಘಟನೆಯಲ್ಲಿ ಉಳ್ಳಾಲ ಪಿಎಸ್ ಇನ್ಸ್‌ಪೆಕ್ಟರ್ ಶ್ರೀ ಬಾಲಕೃಷ್ಣ, ಸಿಸಿಬಿ ಘಟಕದ ಪಿಸಿ ಶ್ರೀ ಅಂಜನಪ್ಪ ಮತ್ತು ಉಳ್ಳಾಲ ಪಿಎಸ್ ಪಿಸಿ ಶ್ರೀ ನಿತಿನ್ ಅವರಿಗೆ ಗಾಯಗಳಾಗಿವೆ. ಗಾಯಗೊಂಡ ಸಿಬ್ಬಂದಿ ಹಾಗೂ ಆರೋಪಿಗಳನ್ನು ತಕ್ಷಣ ಚಿಕಿತ್ಸೆಗಾಗಿ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತು ಉಳ್ಳಾಲ ಪಿಎಸ್‌ನಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular