ಬಂಟ್ವಾಳ : ಜನವರಿ 03 ರಂದು ರಾತ್ರಿ, ಬಂಟ್ವಾಳ ತಾಲೂಕು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ, ಉದ್ಯಮಿಯೊಬ್ಬರ ಮನೆಗೆ 06 ಜನ ಅಪರಿಚಿತರು ಇ ಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಇದೀಗ ಕೇರಳ ರಾಜ್ಯದ ಅನಿಲ್ ಫರ್ನಾಂಡಿಸ್ ( 49 ) ಎಂಬವನನ್ನು ಬಂದಿದ್ದಾರೆ.
ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಯತೀಶ್ ಎನ್, ಐ.ಪಿ.ಎಸ್ ರವರ ಅದೇಶದ ಮೇರೆಗೆ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಿ, ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿದ್ದು , ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿತಯಿಂದ ಕೃತ್ಯಕ್ಕೆ ಉಪಯೋಗಿಸಿದ KL-02-BP-1104ನೇ ನೊಂದಣಿ ನಂಬ್ರದ ಎರ್ಟಿಗಾ ಕಾರು, 5,00,000/-ರೂ ನಗದು ಹಾಗೂ ನಕಲಿ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ TN-20-DB-5517ನೇ ನಂಬರ ಪ್ಲೇಟ್‌ನ್ನು ವಶಪಡಿಸಿಕೊಂಡಿದ್ದು, ಸ್ವಾದೀನಪಡಿಸಿಕೊಂಡ ನಗದು ಹಾಗೂ ವಾಹನದ ಒಟ್ಟು ಮೌಲ್ಯ- 11,00,000/- ರೂ ಆಗಬಹುದು. ಎಂದು ತಿಳಿದಿದೆ.
ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಿಂದ, ಅಪರಾಧ ಪ್ರಕರಣಗಳಲ್ಲಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.